ADVERTISEMENT

ಸರ್ಕಾರದ ವೃತ್ತಿಶಿಕ್ಷಣ ನೀತಿ ಖಂಡಿಸಿ ಎಸ್‌ಎಫ್‌ಐ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2013, 6:19 IST
Last Updated 17 ಡಿಸೆಂಬರ್ 2013, 6:19 IST

ಹಾವೇರಿ: ರಾಜ್ಯ ಸರ್ಕಾರದ ನೂತನ ವೃತ್ತಿಶಿಕ್ಷಣ ಕಾಯ್ದೆಯ ವಿರೋಧಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಜಿ.ಎಚ್.ಕಾಲೇಜು ಎದುರಿಗೆ ಕೆಲಕಾಲ ರಾಷ್ಟೀಯ ಹೆದ್ದಾರಿ ತಡೆನಡೆಸಿ ಪ್ರತಿಭಟಿಸಿದ ವಿದ್ಯಾರ್ಥಿಗಳು ವಿದ್ಯಾರ್ಥಿ ವಿರೋಧಿ ನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಎಸ್‌ಎಫ್‌ಐ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಪೂಜಾರ ಮಾತನಾಡಿ, ಸರ್ಕಾರ ವೃತ್ತಿ ಶಿಕ್ಷಣ ಸಂಸ್ಥೆಗಳ ಪ್ರವೇಶ ನಿಯಂತ್ರಣ ಮತ್ತು ಶುಲ್ಕ ನಿಗದಿ ಕಾಯ್ದೆ ಹೆಸರಿನಲ್ಲಿ ವೃತ್ತಿ ಶಿಕ್ಷಣವನ್ನು ಮಾರಾಟ ಮಾಡಲು ಹೊರಟಿದೆ.

ಎಂಜಿನಿಯರಿಂಗ್, ಮೆಡಿಕಲ್ ಕೋರ್ಸ್‌ಗಳ ಶುಲ್ಕ ಹೆಚ್ಚಿಸಿ, ಖಾಸಗಿ ಕಾಲೇಜುಗಳಿಗೆ ಸಿಇಟಿ ಪ್ರವೇಶ ಪ್ರಕ್ರಿಯೆ ಕೈ ಬಿಡಲು ಮುಂದಾಗಿದೆ. ಇದರಿಂದ ಲಕ್ಷಾಂತರ ದಲಿತ-, ಹಿಂದುಳಿದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಎಸ್‌ಎಫ್‌ಐ ಮುಖಂಡರಾದ ಇಮಾಮ್‌ನದಾಫ್‌, ಪ್ರಸನ್ನ ಹಿರೇಮಠ, ಮಲ್ಲಿಕಾರ್ಜುನ ಹಿರೇಮಠ, ಮಹ್ಮದ್‌ರಫೀಕ್ ನದಾಫ್‌, ಮಂಜುನಾಥ ಉಪ್ಪಾರ, ಚಂದ್ರು ಶಂಕ್ರಪ್ಪನವರ, ದೀಪಕ್‌ ಕಬ್ಬೂರ, ವಿಶಾಲ ಹೇರೂರ, ಅಮಿತ ಶಿವಳ್ಳಿ, ಅರವಿಂದ ಪತ್ತಾರ, ಶೈಲಾ.ಕೆ., ಯಲ್ಲಮ್ಮ, ಸಬಿಹಾ, ರೂಪಾ , ಹರ್ಷಾ, ಅಕ್ಷಯ, ಸುಮಂತ ಹಂಚಿ ನಾಳ, ದರ್ಶನ ಉಪಾಸಿ, ಆನಂದ ಕೂಲಿ, ಅಭಿಲಾಷ ಹೊಸ ಮಠ, ಮಂಜುನಾಥ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.