ADVERTISEMENT

ಸಾಧನೆಗೆಗಾಗಿ ಪ್ರಯತ್ನ ತೀರಾ ಅಗತ್ಯ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2012, 6:05 IST
Last Updated 15 ಅಕ್ಟೋಬರ್ 2012, 6:05 IST

ಹಾವೇರಿ: `ವಿದ್ಯಾರ್ಥಿಗಳಿಗೆ ಜೀವನದಲ್ಲಿ ಸಾಧಿಸುವ ಛಲವಿರಬೇಕು. ಜೊತೆಗೆ ಸಾಧನೆಗೆ ನಿರಂತರ ಪ್ರಯತ್ನ ಹಾಗೂ ಪರಿಶ್ರಮದಿಂದ ಕಾರ್ಯ ಪ್ರವೃತ್ತರಾ ದಾಗ ಮಾತ್ರ ಯಶಸ್ಸು ಲಭಿಸುತ್ತದೆ~ ಎಂದು ಶಾಸಕ ನೆಹರೂ ಓಲೇಕಾರ ಹೇಳಿದರು.

ತಾಲ್ಲೂಕಿನ ಅಗಡಿ ಗ್ರಾಮದ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.  ವಿದ್ಯಾರ್ಥಿಗಳು ಜೀವನದಲ್ಲಿ ಶ್ರಮ ಪಡುವುದನ್ನು ರೂಢಿಸಿಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆ ಉತ್ತಮ ವೇದಿಕೆಯಾಗಿದೆ. ಅಲ್ಲದೇ, ಸಮಾಜದ ಕುರಿತು ಕಾಳಜಿ ಹಾಗೂ ಜವಾಬ್ದಾರಿ ಹಂಚಿಕೆಯಲ್ಲಿ ಸೇವಾ ಯೋಜನೆ ಪ್ರಮುಖ ಪ್ರಾತ್ರ ವಹಿಸುತ್ತದೆ ಎಂದು ತಿಳಿಸಿದರು.

ಮಕ್ಕಳು ಸಹಜವಾಗಿ ಅನುಕರಣೆ ಶೀಲರಾಗಿರುವುದರಿಂದ ಸಮಾಜದ ಹಿರಿಯರ ಕ್ರೀಯೆಗಳು ಮಕ್ಕಳ ಮೇಲೆ ಪರಿಣಾಮ ಬೀರುತ್ತವೆ. ಈ ಹಿನ್ನೆಲೆ ಯಲ್ಲಿ ಹಿರಿಯರು ಸನ್ನಡತೆಯ ಮೌಲ್ಯ ಗಳನ್ನು, ಮಾನವೀಯ ಗುಣಗಳನ್ನು ಬೆಳೆಸಿಕೊಳ್ಳುವ ಮೂಲಕ ಮಕ್ಕಳಿಗೆ ಮಾದರಿಯಾಗಿರಬೇಕು ಎಂದು ಕಿವಿಮಾತು ಹೇಳಿದರು.
ಶಿಕ್ಷಣ ಚಿಂತಕ ನಿಜಲಿಂಗಪ್ಪ ಬಸೇಗಣ್ಣಿ ಮಾತನಾಡಿ, ವಿದ್ಯಾರ್ಥಿ ಜೀವನ ಬಂಗಾರದ ಜೀವನವಾಗಿದೆ.

ಈ ಜೀವನವನ್ನು ಯಾರೂ ವ್ಯರ್ಥವಾಗಿ ಕಳೆಯದೇ ಸರಿಯಾಗಿ ಸದ್ಭಳಕೆ ಮಾಡಿ ಕೊಳ್ಳಬೇಕು ಎಂದರಲ್ಲದೇ,  ರಾಷ್ಟ್ರೀಯ ಸೇವಾ ಯೋಜನೆ ಶಿಬಿರಲ್ಲಿ ವಿದ್ಯಾರ್ಥಿ ಗಳು ಕ್ರಿಯಾಶೀಲರಾಗಿ ಪಾಲ್ಗೊಳ್ಳಬೇಕು ಎಂದು ಸಲಹೆ ಮಾಡಿದರು. ಇದೇ ಸಂದರ್ಭದಲ್ಲಿ ಎಪಿಎಂಸಿ ಸದಸ್ಯ ನಾಗರಾಜ ಬಸೇಗಣ್ಣಿ ಶಿಬಿರಾರ್ಥಿಗಳಿಗೆ ಪ್ರತಿವಿಜ್ಞಾವಿಧಿ ಬೋಧಿಸಿದರು.

ಅಗಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೂರ್ಣಿಮಾ ನಿವಾರ್ಣಮಠ ಅಧ್ಯಕ್ಷತೆ ವಹಸಿದ್ದರು.
ಜಿಲ್ಲಾ ಪಂಚಾಯಿತಿ ಸದಸ್ಯೆ ಸಾವಿತ್ರಮ್ಮ ರಾಮಗೌಡ್ರ, ತಾಲ್ಲೂಕು ಪಂಚಾಯಿತಿ ಸದಸ್ಯೆ ರೆಹನಾ ಚಾಂದ್‌ಶೇಖ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಫಕ್ಕೀರವ್ವ ಹರಿಜನ, ಸದಸ್ಯರಾದ ವಸಂತರಾವ್ ಕಾಟೆ, ಸದಾಶಿವ ಬಸೇಗಣ್ಣಿ, ಎಸ್‌ಡಿಎಂಸಿ ಅಧ್ಯಕ್ಷ ಹನುಮಂತಪ್ಪ   ಕಂಬಳಿ  ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಪ್ರಾಚಾರ್ಯ ಎಸ್.ಎಚ್.ಚಿನ್ನಿಕಟ್ಟಿ ಸ್ವಾಗತಿಸಿದರು.

ಆರ್.ಕೆ.ಅಂಬೋರೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್.ಬಿ.ದೊಡಮನಿ ನಿರೂಪಿಸಿದರು. ಎಸ್.ಬಿ.ದೊಡ್ಡಮನಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT