ADVERTISEMENT

ಸಿಇಟಿ ತರಬೇತಿ ಶಿಬಿರ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2013, 6:07 IST
Last Updated 6 ಏಪ್ರಿಲ್ 2013, 6:07 IST

ರಾಣೆಬೆನ್ನೂರು: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಅನುಕೂಲಕ್ಕೆ ತರಬೇತಿ ಆರಂಭಿಸಲಾಗಿದೆ. ವಿದ್ಯಾರ್ಥಿಗಳು ಇದರ ಲಾಭ ಪಡೆದುಕೊಳ್ಳಬೇಕು ಎಂದು  ಹಾವೇರಿ  ಹಾವೇರಿ ಜಿ.ಎಚ್. ಕಾಲೇಜಿನ ಪ್ರಾ.ಡಾ.ಬಿ.ಬನ್ನೂರು ಹೇಳಿದರು.

ನಗರದ ಕೆಎಲ್‌ಇ ಸಂಸ್ಥೆಯ ರಾಜರಾಜೇಶ್ವರಿ ಕಾಲೇಜಿನಲ್ಲಿ  ಸಿಇಟಿ ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸ್ಥಾನಿಕ ಆಡಳಿತ ಮಂಡಳಿಯ ಉಪಾಧ್ಯಕ್ಷ ವಿ.ಪಿ.ಲಿಂಗನಗೌಡ್ರ ಮಾತನಾಡಿದರು.

ಸ್ಥಾನಿಕ ಆಡಳಿತ ಮಂಡಳಿಯ ಸದಸ್ಯರಾದ ವೀರಣ್ಣ ಅಂಗಡಿ, ಬಿ.ಎಸ್.ಪಟ್ಟಣಶೆಟ್ಟಿ, ವೀರೇಶ ಅಂಗಡಿ, ಸಂಪನ್ಮೂಲ ವ್ಯಕ್ತಿಗಳಾದ ಎಸ್.ಎಸ್. ಪಾಟೀಲ, ಅನಿಲ ದಂಡಿನ ಮತ್ತಿತರರು ಉಪಸ್ಥಿತರಿದ್ದರು. ಅನುರಾಧ ಸ್ವಾಗತಿಸಿದರು. ಎಸ್.ಬಿ. ಗುರ್ಜೇರ ಕಾರ್ಯಕ್ರಮ ನಿರೂಪಿಸಿದರು. ಎಸ್.ಐ.ಪಾಟೀಲ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT