ಹಾವೇರಿ: ‘ನಾಡಿನ ಕಲೆ, ಸಂಸ್ಕೃತಿ ಹಾಗೂ ಕೃಷಿ ಪರಂಪರೆ ಬಿಂಬಿಸುವ ಫಲಪುಷ್ಪ ಪ್ರದರ್ಶನ ಕೇವಲ ಜಿಲ್ಲೆಗೆ ಸೀಮಿತಗೊಳಿಸದೇ, ರಾಜ್ಯವ್ಯಾಪಿ ನಡೆಸಲು ಸರ್ಕಾರ ಮುಂದಾಗಬೇಕು’ ಎಂದು ಹುಕ್ಕೇರಿಮಠದ ಸದಾಶಿವ ಶ್ರೀಗಳು ಹೇಳಿದರು.
ನಗರದ ಜಿಲ್ಲಾ ಗುರುಭವನದಲ್ಲಿ ಜಿಲ್ಲಾ ತೋಟಗಾರಿಕಾ ಇಲಾಖೆ, ಜಿಲ್ಲಾ ಆಡಳಿತ ಹಾಗೂ ಜಿಲ್ಲಾ ಪಂಚಾಯ್ತಿ ಬುಧವಾರದಿಂದ ಮೂರು ದಿನಗಳ ಕಾಲ ಆಯೋಜಿಸಿದ ಜಿಲ್ಲಾ ಮಟ್ಟದ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕೃಷಿ, ತೋಟಗಾರಿಕೆ ಎಂಬುದು ಒಂದು ಕಲೆ, ಅದು ಹೆಚ್ಚು ಅಭಿವೃದ್ಧಿ ಗೊಂಡರೆ ನಾಡು ಸಹಜವಾಗ ಅಭಿವೃದ ್ಧಿಗೊಳ್ಳಲಿದೆ. ಇಂತಹ ಕೃಷಿ ಉಳಿದು, ಬೆಳೆದು ಬರಬೇಕಾದರೇ ಕೃಷಿಕರನ್ನು ಪ್ರೋತ್ಸಾಹಿಸಬೇಕು ಎಂದರು.
ರೈತರ ಬೆಳೆಗಳಿಗೆ ಮಾರುಕಟ್ಟೆಯಲ್ಲಿ ವೈಜ್ಞಾನಿಕ ಬೆಲೆ ಸಿಗದ ಕಾರಣಕ್ಕೆ ಬಹುತೇಕ ರೈತರು ಕೃಷಿ ಚಟುವಟಿಕೆ ಯಿಂದ ವಿಮುಖ ರಾಗುತ್ತಿದ್ದಾರೆ. ಸರ್ಕಾರ ಕೃಷಿ ಉತ್ಪನ್ನ ಹೆಚ್ಚಳಕ್ಕೆ ಪ್ರೋತ್ಸಾಹ ನೀಡುವುದರ ಜತೆಗೆ ಕೃಷಿಕರು ಸ್ವಾವಲಂಬಿ ಯಾಗುವಂತಹ ಯೋಜನೆಗಳನ್ನು ರೂಪಿಸಬೇಕು ಎಂದು ಹೇಳಿದರು.
ಇಂದಿನ ಯುವ ರೈತರು ಮಣ್ಣಿನ ಮಹತ್ವ ಮರೆತ್ತಿದ್ದಾರೆ. ಭೂಮಿ ತಾಯಿ ರೈತನ ಬೆವರಿನ ಹನಿಯಿಂದ ಖುಷಿಯಾ ಗುತ್ತಾಳೆ. ಆದ್ದರಿಂದ ರೈತರು ಜಮೀನು ಗಳಿಗೆ ರಾಸಾಯನಿಕ ಗೊಬ್ಬರ ಬಳಕೆ ಮಾಡದೇ, ಕೊಟ್ಟಿಗೆ ಗೊಬ್ಬರ ಬಳಕೆ ಮಾಡಿಕೊಂಡು ಹೆಚ್ಚು ಆದಾಯ ಹಾಗೂ ಇಳುವರಿ ಬರುವಂತಹ ಬೆಳೆಗಳನ್ನು ಬೆಳೆಯುವತ್ತ ಚಿತ್ತ ಹರಿಸಬೇಕು ಎಂದು ಸಲಹೆ ಮಾಡಿದರು.
ಶಾಸಕ ರುದ್ರಪ್ಪ ಲಮಾಣಿ ಮಾತನಾಡಿ, ಕೃಷಿಕರನ್ನು ಹಾಗೂ ಕಲಾವಿದರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಸರ್ಕಾರ ಹಾಗೂ ತೋಟಗಾರಿಕೆ ಇಲಾಖೆ ಫಲಪುಷ್ಪ ಪ್ರದರ್ಶ ಏರ್ಪಡಿಸಿರುವ ಕಾರ್ಯ ಶಾ್ಲಘನೀಯ ಎಂದರು.
ಈ ಸಂದರ್ಭದಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಕ ಅಧಿಕಾರಿ. ಕೆ.ಬಿ.ಆಂಜನಪ್ಪ, ತೋಟಗಾರಿ ಇಲಾಖೆ ಹಿರಿಯ ಸಹಾಯಕ ಜಿಲ್ಲಾ ನಿರ್ದೇಶಕ ಕೃಷ್ಣ ಉಕ್ಕುಂದ, ಕಲಾವಿದರಾದ ಕೃಷ್ಣ ತರಿಕೇರಿ, ಬಸವರಾಜ, ಮೌಲಾಸಾಬ್ ನದಾಫ್ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.