ADVERTISEMENT

₹ 41.89 ಕೋಟಿ ಬೆಳೆ ವಿಮೆ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2018, 10:44 IST
Last Updated 7 ಮಾರ್ಚ್ 2018, 10:44 IST

ಹಾವೇರಿ: ‘2016–17ರ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಫಸಲ್ ಬಿಮಾ ಬೆಳೆವಿಮೆ ಯೋಜನೆ ಅಡಿ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಹತ್ತಿ ಬೆಳೆಗೆ ಬೆಳೆವಿಮೆ ಕಂತು ತುಂಬಿದ ರೈತರಿಗೆ ಜಿಲ್ಲೆಗೆ ಒಟ್ಟು ₹ 41.89 ಕೋಟಿ ಬೆಳೆವಿಮೆ ಪರಿಹಾರ ಮೊತ್ತ ಬಿಡುಗಡೆಯಾಗಿದೆ’ ಎಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ. ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಈ ಮೊತ್ತವನ್ನು ಸಂಬಂಧಿಸಿದ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲು ಈಗಾಗಲೇ ಬ್ಯಾಂಕ್‌ಗಳಿಗೆ ನಿರ್ದೇಶನ ನೀಡಲಾಗಿದ್ದು, ಕಾರ್ಯ ಪ್ರಗತಿಯಲ್ಲಿದೆ. ರೈತರು ಸಂಬಂಧಿಸಿದ ಬ್ಯಾಂಕ್‌ಗಳ ಮುಖಾಂತರ ಪರಿಹಾರದ ಮೊತ್ತವನ್ನು ಪಡೆದುಕೊಳ್ಳಬಹುದು’ ಎಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT