ADVERTISEMENT

‘ದೇಶದ ಅಭಿವೃದ್ಧಿಗೆ ಕಡ್ಡಾಯ ಮತದಾನ ಅಗತ್ಯ’

​ಪ್ರಜಾವಾಣಿ ವಾರ್ತೆ
Published 27 ಜನವರಿ 2018, 10:16 IST
Last Updated 27 ಜನವರಿ 2018, 10:16 IST

ಹಾನಗಲ್: ‘ಹೆಚ್ಚು ಯುವ ಜನರನ್ನು ಹೊಂದಿರುವ ಭಾರತ ಈಗ ವಿಶ್ವದಲ್ಲಿ ಯುವಶಕ್ತಿಯ ರಾಷ್ಟ್ರವಾಗಿ ಕಂಗೊಳಿಸುತ್ತಿದೆ. ಆದರೆ, ಈ ದೇಶದ ಯುವ ಸಮೂಹ ಮತದಾನ ಪ್ರಕ್ರಿಯೆಯಿಂದ ದೂರ ಉಳಿಯುತ್ತಿರುವುದು ವಿಪರ್ಯಾಸ’ ಎಂದು ಸ್ಥಳೀಯ ಕುಮಾರೇಶ್ವರ ಕಲಾ ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಪ್ರೊ.ಎಸ್‌.ವಿ.ಸೋಮನಾಥ ವಿಷಾಧ ವ್ಯಕ್ತಪಡಿಸಿದರು.

ಇಲ್ಲಿನ ಸ್ಥಳೀಯ ಕುಮಾರೇಶ್ವರ ಕಲಾ ವಾಣಿಜ್ಯ ಕಾಲೇಜಿನಲ್ಲಿ ಗುರುವಾರ ನಡೆದ ‘ರಾಷ್ಟ್ರೀಯ ಮತದಾರರ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಷ್ಟ್ರೀಯ ಸೇವಾ ಯೋಜನೆ ಘಟಕದ ಅಧಿಕಾರಿ ಡಾ.ಪ್ರಕಾಶ ಹೊಳೇರ ಮಾತನಾಡಿ, ‘ಯೋಗ್ಯ ಜನಪ್ರತಿನಿಧಿಯನ್ನು ಆಯ್ಕೆ ಮಾಡುವುದು ನಮ್ಮ ಕರ್ತವ್ಯ, ದೇಶದ ಅಭಿವೃದ್ಧಿಗೆ ಕಡ್ಡಾಯ ಮತದಾನ ಅಗತ್ಯ’ ಎಂದರು.

ADVERTISEMENT

ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದ ಪ್ರೊ.ಸಿ.ಮಂಜುನಾಥ, ‘ಮತದಾನ ಪವಿತ್ರವಾದ ಹಕ್ಕು. ಇದು ಸಾಕಾರಗೊಂಡಾಗಲೇ ಪ್ರಜಾಪ್ರಭುತ್ವದ ಆಶಯಗಳು ಈಡೇರಲು ಸಾಧ್ಯವಿದೆ. ಯುವಜನರು ಸೃಜಶೀಲತೆಯುಳ್ಳವರು ರಾಜಕೀಯ ಚಟುವಟಿಕೆಗಳಲ್ಲಿ ಭಾಗಿಯಾಗಬೇಕು. ಅಂಗಾದ ಮಾತ್ರ ರಾಜಕೀಯ ಕ್ಷೇತ್ರ ಶುಭ್ರವಾಗಲು ಮಾರ್ಗವಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.