ADVERTISEMENT

‘ಪೋಲಿಯೊ ನಿರ್ಮೂಲನೆಗೆ ಪ್ರತಿಯೊಬ್ಬರು ಮುಂದಾಗಿ’

​ಪ್ರಜಾವಾಣಿ ವಾರ್ತೆ
Published 29 ಜನವರಿ 2018, 10:09 IST
Last Updated 29 ಜನವರಿ 2018, 10:09 IST

ಹಿರೇಕೆರೂರ: ಪಟ್ಟಣದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾನುವಾರ ನಡೆದ ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮಕ್ಕೆ ಶಾಸಕ ಯು.ಬಿ.ಬಣಕಾರ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ‘ದೇಶದಲ್ಲಿ ಪೋಲಿಯೊ ನಿರ್ಮೂಲನೆಗೆ ಪ್ರತಿಯೊಬ್ಬರು ಮುಂದಾಗಬೇಕು’ ಎಂದು ಸಲಹೆ ನೀಡಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಚಿದಾನಂದ ಮಾತನಾಡಿ, ‘ ತಾಲ್ಲೂಕಿನಲ್ಲಿ  ಮನೆಮನೆಗೆ ಭೇಟಿ ನೀಡಿ 45,840 ಪೋಲಿಯೊ ಲಸಿಕೆ ಹಾಕಲು ಮಕ್ಕಳನ್ನು ಗುರುತಿಸಲಾಗಿದೆ. ಮೊದಲ ಹಂತದಲ್ಲಿ ಬೂತ್‌ಗಳಲ್ಲಿ ಹನಿ ಹಾಕಲಾಗುವುದು. ಸೋಮವಾರದಿಂದ ಮನೆ ಮನೆಗೆ ತೆರಳಿ ಪೋಲಿಯೊ ಹನಿ ಹಾಕಲಾಗುವುದು’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯ್ತಿ ಸದಸ್ಯರಾದ ಎಸ್‌.ಕೆ.ಕರಿಯಣ್ಣನವರ, ಸುಮಿತ್ರಾ ಬಸನಗೌಡ ಪಾಟೀಲ, ಪಟ್ಟಣ ಪಂಚಾಯ್ತಿ ಅಧ್ಯಕ್ಷ ರಾಜಶೇಖರ ಹಂಪಾಳಿ, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಮಹೇಶ ಗುಬ್ಬಿ, ಡಾ.ಹೊನ್ನಪ್ಪ, ಡಾ.ಶ್ರೀಕಾಂತ, ಮಹೇಂದ್ರ ಬಡಳ್ಳಿ, ಶಿವಕುಮಾರ ತಿಪ್ಪಶೆಟ್ಟಿ, ಶಿವಪ್ರಸಾದ್ ಬಿ.ಎಸ್., ಎಸ್.ಎಂ.ಬಾರಂಗಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.