ಬ್ಯಾಡಗಿ (ಹಾವೇರಿ ಜಿಲ್ಲೆ): ‘ನಾಡಿನ ಮಠ-ಮಾನ್ಯಗಳ ಮೇಲೆ ಅಪಾರ ಭಕ್ತಿ ಹೊಂದಿರುವ ನಾನು ಮುಖ್ಯಮಂತ್ರಿಯಾಗಿದ್ದಾಗ ರೈತರು ಹಾಗೂ ಮಠಗಳ ಅಭಿವೃದ್ಧಿಗಾಗಿ ಅನುದಾನ ನೀಡಿದ ಸಮಾಧಾನವಿದೆ’ ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹೇಳಿದರು.
ತಾಲ್ಲೂಕಿನ ಚಿಕ್ಕಬಾಸೂರು ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ ‘ಗುರು ಶಿವಯೋಗಿ ಸಿದ್ಧರಾಮೇಶ್ವರರ 851ನೇ ಜಯಂತಿ ಮಹೋತ್ಸವ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ಸಾಮಾಜಿಕ ಮತ್ತು ವಚನ ಕ್ರಾಂತಿಗಾಗಿ ನಾಡಿನೆಲ್ಲೆಡೆ ಸಂಚರಿಸಿ ಜನರ ನೀರಿನ ದಾಹ ಇಂಗಿಸುವುದರ ಜೊತೆಗೆ ಕಾಯಕ ನಿಷ್ಠೆ, ಉತ್ತಮ ಆದರ್ಶ ಗುಣಗಳನ್ನು ಸಮಾಜಕ್ಕೆ ನೀಡಿದ ಗುರು ಸಿದ್ದರಾಮೇಶ್ವರರು ಸದಾ ಪ್ರೇರಕ ಶಕ್ತಿ’ ಎಂದು ಹೇಳಿದರು.
ಪ್ರಶಸ್ತಿ ಪ್ರದಾನ: ಕಿರವಾಡಿ ವೀರಬಸಪ್ಪ ಅವರಿಗೆ ಮರಣೋತ್ತರವಾಗಿ ನೀಡಿದ ‘ನೊಳಂಬ ಶ್ರೀ’ ಪ್ರಶಸ್ತಿಯನ್ನು ಅವರ ಪುತ್ರ ಸುರೇಂದ್ರಪ್ಪ ಕಿರವಾಡಿ ಸ್ವೀಕರಿಸಿದರು. ಅತ್ತಿಕಟ್ಟಿ ಹಾಗೂ ನಂದಿಗುಡಿ ವೃಷಭಪುರಿ ಮಹಾಸಂಸ್ಥಾನ ಸಿದ್ದರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.
ಸಿರಿಗೆರೆ ತರಳಬಾಳು ಬೃಹನ್ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಸುಕ್ಷೇತ್ರ ಕೆರೆಗೋಡಿ–ರಂಗಾಪುರ ಗುರು ಪರದೇಶಿಕೇಂದ್ರ ಸ್ವಾಮೀಜಿ, ಪುಷ್ಪಗಿರಿ ಮಹಾಸಂಸ್ಥಾನ ಹಳೇಬೀಡು ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ, ಶಾಸಕ ಬಸವರಾಜ ಶಿವಣ್ಣನವರ, ಬೆಂಗಳೂರು ನೊಳಂಬ ಲಿಂಗಾಯತ ಸಂಘದ ಅಧ್ಯಕ್ಷ ಎಸ್.ಆರ್.ಪಾಟೀಲ, ಸುರೇಶಗೌಡ್ರ ಪಾಟೀಲ, ವಿರೂಪಾಕ್ಷಪ್ಪ ಬಳ್ಳಾರಿ, ಎಂ.ಪಿ.ರೇಣುಕಾಚಾರ್ಯ, ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ.ಪರಮಶಿವಮೂರ್ತಿ ಡಿ.ವಿ., ಸೋಮಶೇಖರಪ್ಪ ಕಣಗಲಬಾವಿ, ಸಮಾಜದ ಮುಖಂಡರಾದ ಪ್ರಭು ದೊಡ್ಮನಿ, ಎಂ.ಎಸ್.ನಾಗರಾಜ, ಸಂದೀಪ ಪಾಟೀಲ ಹಾಜರಿದ್ದರು.
Cut-off box - null
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.