ADVERTISEMENT

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಕನ್ನಡ ರಥಕ್ಕೆ ಅದ್ಧೂರಿ ಚಾಲನೆ

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2022, 12:43 IST
Last Updated 30 ನವೆಂಬರ್ 2022, 12:43 IST
86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಜ್ಜುಗೊಂಡಿರುವ ‘ಕನ್ನಡ ರಥ’ಕ್ಕೆ ಶಿಗ್ಗಾವಿ ತಾಲ್ಲೂಕಿನ ಗೊಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಆವರಣದಲ್ಲಿ ಬುಧವಾರ ಶಾಸಕ ನೆಹರು ಓಲೇಕಾರ ಮತ್ತು ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಲಿಂಗಯ್ಯ ಹಿರೇಮಠ ಚಾಲನೆ ನೀಡಿದರು
86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಜ್ಜುಗೊಂಡಿರುವ ‘ಕನ್ನಡ ರಥ’ಕ್ಕೆ ಶಿಗ್ಗಾವಿ ತಾಲ್ಲೂಕಿನ ಗೊಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಆವರಣದಲ್ಲಿ ಬುಧವಾರ ಶಾಸಕ ನೆಹರು ಓಲೇಕಾರ ಮತ್ತು ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಲಿಂಗಯ್ಯ ಹಿರೇಮಠ ಚಾಲನೆ ನೀಡಿದರು   

ಶಿಗ್ಗಾವಿ (ಹಾವೇರಿ): 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರದ ಅಂಗವಾಗಿ ನಾಡಿನಾದ್ಯಂತ ಸಂಚರಿಸಲಿರುವ‘ಕನ್ನಡ ರಥ’ಕ್ಕೆ ತಾಲ್ಲೂಕಿನ ಗೊಟಗೋಡಿಯ ಜಾನಪದ ವಿಶ್ವವಿದ್ಯಾಲಯದ ಆವರಣದಲ್ಲಿ ಬುಧವಾರ ಅದ್ಧೂರಿ ಚಾಲನೆ ನೀಡಲಾಯಿತು.

‘ಕನ್ನಡ ರಥ’ಕ್ಕೆ ಡಿ.1ರಂದು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಭುವನಗಿರಿಯ ಭುವನೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ರಾಜ್ಯದ 31 ಜಿಲ್ಲೆಗಳಲ್ಲೂ ಸಂಚರಿಸಲಿದೆ.ಭುವನೇಶ್ವರಿ ದೇಗುಲದಿಂದ ದೀಪ ತೆಗೆದುಕೊಂಡು ಕನ್ನಡ ರಥ ಹೊರಡಲಿದೆ. ಅದೇ ದೀಪದಿಂದ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟನೆ ಮಾಡಲಿರುವುದು ಈ ಬಾರಿಯ ವಿಶೇಷ’ ಎಂದು ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಲಿಂಗಯ್ಯ ಹಿರೇಮಠ ತಿಳಿಸಿದ್ದಾರೆ.

ಜನವರಿ 1ರಿಂದ 5ರವರೆಗೆ ಹಾವೇರಿ ಜಿಲ್ಲೆಯಾದ್ಯಂತ ಸಂಚರಿಸಿ, ಜ.6ರಂದು ಹಾವೇರಿ ನಗರದಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನದ ಮೆರವಣಿಗೆಯಲ್ಲಿ ಕನ್ನಡ ರಥ ಸಾಗಲಿದೆ.ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ರಥವನ್ನು ಭವ್ಯವಾಗಿ ಸ್ವಾಗತಿಸಲು ಸೂಚಿಸಲಾಗಿದೆ.

ADVERTISEMENT

ಚಾಲನೆ ನೀಡುವ ಸಂದರ್ಭದಲ್ಲಿ ಶಾಸಕ ನೆಹರು ಓಲೇಕಾರ,ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಟಿ.ಎಂ.ಭಾಸ್ಕರ್, ಸಿ.ಬಿ.ಯಲಿಗಾರ ಸೇವಾ ಸಂಸ್ಥೆ ಅಧ್ಯಕ್ಷ ಶಶಿಧರ ಯಲಿಗಾರ, ಹಾವೇರಿ ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.