ADVERTISEMENT

ಮೀಸಲಾತಿ ಹೋರಾಟಕ್ಕೆ ಸ್ಪಂದಿಸದಿದ್ದರೆ ಸಿದ್ದರಾಮಯ್ಯಗೆ ತಕ್ಕ ಪಾಠ: ರಾಜಣ್ಣ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2021, 14:05 IST
Last Updated 4 ಫೆಬ್ರುವರಿ 2021, 14:05 IST
ರಾಜಣ್ಣ ಜಿ.ಗುಳಗುಳಿ
ರಾಜಣ್ಣ ಜಿ.ಗುಳಗುಳಿ   

ಹಾವೇರಿ: ‘ಬೆಂಗಳೂರಿನಲ್ಲಿ ಫೆ.7ರಂದು ಎಸ್‌.ಟಿ. ಮೀಸಲಾತಿಗಾಗಿ ನಡೆಯುವ ‘ಕುರುಬರ ಹಕ್ಕೊತ್ತಾಯ ಸಮಾವೇಶ’ಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಾರದಿದ್ದರೆ ಸಮಾಜ ಅವರಿಗೆ ತಕ್ಕ ಪಾಠ ಕಲಿಸಲಿದೆ’ ಎಂದು ಹಾಲುಮತ ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷ ರಾಜಣ್ಣ ಜಿ.ಗುಳಗುಳಿ ಎಚ್ಚರಿಕೆ ನೀಡಿದರು.

ಸಿದ್ದರಾಮಯ್ಯ ಅವರು ತಮ್ಮ ನಿಲುವಿನಲ್ಲಿ ಬದಲಾವಣೆ ಮಾಡಿಕೊಂಡು, ತಮ್ಮ ರಾಜಕೀಯ ಏಳಿಗೆಗಾಗಿ ಶ್ರಮಿಸಿದ ಸಮುದಾಯದ ಬೇಡಿಕೆಗೆ ಸೂಕ್ತವಾಗಿ ಸ್ಪಂದಿಸಬೇಕು ಎಂದು ಹಾಲುಮತ ಮಹಾಸಭಾ ಮನವಿ ಮಾಡಿಕೊಳ್ಳುತ್ತದೆ. ತಪ್ಪಿದಲ್ಲಿ ಸಿದ್ದರಾಮಯ್ಯ ಅವರ ನಿವಾಸದ ಮುಂದೆ ಮಹಾಸಭಾದ ಎಲ್ಲ ಜಿಲ್ಲಾ ಘಟಕಗಳ ವತಿಯಿಂದ ಸರಣಿಯಾಗಿ ಶಾಂತಿಯುತ ಧರಣಿ ನಡೆಸಲು ಹಿಂಜರಿಯುವುದಿಲ್ಲ ಎಂದು ಗುರುವಾರ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.

ಸಿದ್ದರಾಮಯ್ಯ, ಮಾಜಿ ಸಚಿವರಾದ ಎಚ್‌.ವೈ. ಮೇಟಿ, ಬಿ.ಬಿ. ಚಿಮ್ಮನಕಟ್ಟಿ ಮುಂತಾದ ಮುಖಂಡರು ಕುರುಬರ ಹೋರಾಟಕ್ಕೆ ಕೈ ಜೋಡಿಸಿಲ್ಲ. ಇವರೆಲ್ಲರೂ ಸಮಾವೇಶದಲ್ಲಿ ಪಾಲ್ಗೊಂಡು ಒಗ್ಗಟ್ಟು ಪ್ರದರ್ಶನ ಮಾಡಬೇಕು. ಇದು ಪಕ್ಷಾತೀತವಾಗಿ ನಡೆಯುತ್ತಿರುವ ಸಮಾವೇಶ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.