ADVERTISEMENT

ಹಾವೇರಿ: ಧರ್ಮಾ ನದಿಯಲ್ಲಿ ಕಾಲು ಜಾರಿ ಬಿದ್ದು ಯುವಕ ಸಾವು

​ಪ್ರಜಾವಾಣಿ ವಾರ್ತೆ
Published 23 ಜುಲೈ 2023, 18:17 IST
Last Updated 23 ಜುಲೈ 2023, 18:17 IST

ಹಾವೇರಿ: ಜಿಲ್ಲೆಯ ಹಾನಗಲ್ ತಾಲ್ಲೂಕಿನ ಹೊಂಬಳಿ ಗ್ರಾಮದ ಬಳಿ ಧರ್ಮಾ ನದಿಯಲ್ಲಿ ಎಮ್ಮೆ ಮೈ ತೊಳೆಯಲು ಹೋದ ಯುವಕ ಭಾನುವಾರ ನೀರು ಪಾಲಾಗಿದ್ದಾನೆ.

ಯಮನಪ್ಪ ಬಂಡಿವಡ್ಡರ (24) ಮೃತಪಟ್ಟ ಯುವಕ.

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಧರ್ಮಾ ನದಿ ದಡದಲ್ಲಿ ಎಮ್ಮೆ ಮೈ ತೊಳೆಯಲು ಹೋದ ಸಂದರ್ಭ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ADVERTISEMENT

ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.