ADVERTISEMENT

ಬೇಡಿಕೆ ಈಡೇರಿಕೆಗೆ ಎಬಿವಿಪಿ ಆಗ್ರಹ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2022, 16:30 IST
Last Updated 5 ಡಿಸೆಂಬರ್ 2022, 16:30 IST
ಹಾವೇರಿ ತಾಲ್ಲೂಕಿನ ಗಾಂಧಿಪುರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ಬಸ್ ಪಾಸ್ ಅನ್ನು ಹಾವೇರಿ ನಗರದವರೆಗೂ ವಿಸ್ತರಿಸುವಂತೆ ಒತ್ತಾಯಿಸಿ ಎಬಿವಿಪಿ ಹಾವೇರಿ ನಗರ ಶಾಖೆಯ ವತಿಯಿಂದ ಸೋಮವಾರ ಗಾಂಧಿಪುರ ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಲಾಯಿತು 
ಹಾವೇರಿ ತಾಲ್ಲೂಕಿನ ಗಾಂಧಿಪುರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ಬಸ್ ಪಾಸ್ ಅನ್ನು ಹಾವೇರಿ ನಗರದವರೆಗೂ ವಿಸ್ತರಿಸುವಂತೆ ಒತ್ತಾಯಿಸಿ ಎಬಿವಿಪಿ ಹಾವೇರಿ ನಗರ ಶಾಖೆಯ ವತಿಯಿಂದ ಸೋಮವಾರ ಗಾಂಧಿಪುರ ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಲಾಯಿತು    

ಹಾವೇರಿ:ತಾಲ್ಲೂಕಿನಗಾಂಧಿಪುರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ಬಸ್ ಪಾಸ್ ಅನ್ನು ಹಾವೇರಿ ನಗರದವರೆಗೂ ವಿಸ್ತರಿಸುವಂತೆ ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಹಾವೇರಿ ನಗರ ಶಾಖೆಯ ವತಿಯಿಂದ ಸೋಮವಾರ ಗಾಂಧಿಪುರ ಕಾಲೇಜಿನಲ್ಲಿ ಪ್ರತಿಭಟನೆ ನಡೆಯಿತು.

ಒಂದು ಗಂಟೆಗೂ ಹೆಚ್ಚು ಕಾಲ ಬೃಹತ್ ಮಾನವ ಸರಪಳಿ ನಿರ್ಮಿಸಿ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಎಬಿವಿಪಿ ಜಿಲ್ಲಾ ಸಂಚಾಲಕ ಗಂಗಾಧರ ಕುಲಕರ್ಣಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಾವೇರಿ, ಹಾವೇರಿ ಜಿಲ್ಲಾ ಕೇಂದ್ರದಿಂದ ದೂರವಿರುವ ಗಾಂಧಿಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉನ್ನತ ಅಭ್ಯಾಸಕ್ಕಾಗಿ ಗ್ರಾಮೀಣ ಭಾಗದ ಸುಮಾರು 3 ಸಾವಿರ ವಿದ್ಯಾರ್ಥಿಗಳು ಗುತ್ತಲ, ಹೊಸರಿತ್ತಿ, ಕರ್ಜಗಿ, ಕೃಷ್ಣಾಪುರ ಮುಂತಾದ ಕಡೆಗಳಿಂದ ಬರುತ್ತಾರೆ.ಕಾಲೇಜಿನವರೆಗೂ ಮಾತ್ರ ಬಸ್ ವಿತರಣೆ ಮಾಡುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಬಹುದೊಡ್ಡ ಸಮಸ್ಯೆಯಾಗಿದೆ ಎಂದು ಹೇಳಿದರು.

ADVERTISEMENT

ಈ ಅವೈಜ್ಞಾನಿಕ ನೀತಿಯನ್ನು ಹಿಂಪಡೆದು ಹಾವೇರಿ ನಗರದವರೆಗೂ ಬಸ್ ಪಾಸ್ ವಿಸ್ತರಣೆ ಮಾಡಬೇಕು. ಗಾಂಧಿಪುರ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮ ಮಂಡಳಿಯ ಹಾವೇರಿ ಹಡಗಲಿ ಬಸ್ಸುಗಳ ನಿಲುಗಡೆಗೆ ಆದೇಶ ನೀಡಿತ್ತು ಮತ್ತು ಹೆಚ್ಚುವರಿ ಬಸ್‌ಗಳ ಸಂಚಾರಕ್ಕೂ ಸಹಿತ ಅನುಮತಿ ನೀಡಿತ್ತು. ಆದರೆ ಕಳೆದ ಕೆಲವು ವಾರಗಳಿಂದ ಯಾವುದೇ ರೀತಿಯ ಹೆಚ್ಚುವರಿ ಬಸ್ ಹಾಗೂ ಹಡಗಲಿ ಬಸ್ಸುಗಳು ನಿಲುಗಡೆಯಾಗದ ಕಾರಣ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ ಎಂದರು.

ಪ್ರತಿಭಟನೆಯಲ್ಲಿ ನಾಗರಾಜ್ ಬ್ಯಾಡಗಿ, ಚನ್ನಬಸ್ಸಯ್ಯ ಪಾಟೀಲ್, ಕಿರಣ್ ಆಲದಕಟ್ಟಿ, ದಯಾನಂದ ಮರಿರೇವಣ್ಣನವರ, ಉದಯ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.