ADVERTISEMENT

ಯುವತಿಯ ಮೇಲೆ ಆ್ಯಸಿಡ್‌ ದಾಳಿ: ಆರೋಪಿ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 29 ಜನವರಿ 2020, 14:22 IST
Last Updated 29 ಜನವರಿ 2020, 14:22 IST

ಹಾವೇರಿ: ನಗರದಲ್ಲಿ ಯುವತಿಯ ಮೇಲೆ ನಡೆದ ಆ್ಯಸಿಡ್‌ ದಾಳಿಗೆ ಸಂಬಂಧಿಸಿದಂತೆ ಬುಧವಾರ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಂತ್ರಸ್ತೆಯ ಹೇಳಿಕೆ ಆಧರಿಸಿ, ಶಂಕಿತ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದ್ದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನಗರದ ಜಿಲ್ಲಾಸ್ಪತ್ರೆಯಲ್ಲಿ ಯುವತಿಗೆ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳವಾರ ರಾತ್ರಿಯೇ ಹುಬ್ಬಳ್ಳಿಯ ಕಿಮ್ಸ್‌ಗೆ ಕಳುಹಿಸಿಕೊಡಲಾಗಿದೆ.

ADVERTISEMENT

‘ಶೇ 15ರಷ್ಟು ಯುವತಿಯ ಮುಖಭಾಗ ಸುಟ್ಟಿದ್ದು, ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಕಣ್ಣಿನ ಭಾಗಕ್ಕೆ ಯಾವುದೇ ರೀತಿಯ ಹಾನಿಯಾಗಿಲ್ಲ. ಇನ್ನೂ ನಾಲ್ಕೈದು ದಿನಗಳವರೆಗೆ ಚಿಕಿತ್ಸೆ ನೀಡಬೇಕಿದ್ದು, ನಂತರ ಪ್ಲಾಸ್ಟಿಕ್‌ ಸರ್ಜರಿ ಕುರಿತು ಯೋಚಿಸಬೇಕು’ ಎಂದು ಕಿಮ್ಸ್‌ ನಿರ್ದೇಶಕ ಡಾ.ರಾಮಲಿಂಗಪ್ಪ ಅಂಟರತಾನಿ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

‘ಕಿಮ್ಸ್‌ಗೆ ಭೇಟಿ ನೀಡಿ, ಯುವತಿಯ ಆರೋಗ್ಯ ವಿಚಾರಿಸಿದ್ದೇವೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ನಮ್ಮ ಜೊತೆ ಚೆನ್ನಾಗಿ ಮಾತನಾಡಿದ್ದಾರೆ. ಅಗತ್ಯ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆ ನೀಡಲಾಗಿದೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಿ.ವೈ.ಶೆಟ್ಟಪ್ಪನವರ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.