ADVERTISEMENT

ಯುವತಿ ಮೇಲೆ ಆ್ಯಸಿಡ್‌ ದಾಳಿ

​ಪ್ರಜಾವಾಣಿ ವಾರ್ತೆ
Published 28 ಜನವರಿ 2020, 15:39 IST
Last Updated 28 ಜನವರಿ 2020, 15:39 IST

ಹಾವೇರಿ: ನಗರದ ರಾಣೆಬೆನ್ನೂರು ರಸ್ತೆಯ ಬಸ್‌ ನಿಲ್ದಾಣದ ಬಳಿ 27 ವರ್ಷದ ಯುವತಿಯ ಮೇಲೆ ಹೆಲ್ಮೆಟ್‌ ಧರಿಸಿದ ವ್ಯಕ್ತಿ ಆ್ಯಸಿಡ್‌ ಎರಚಿ ಪರಾರಿಯಾದ ಘಟನೆ ಮಂಗಳವಾರ ಮಹಿಳಾ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬ್ಯಾಡಗಿಯ ಗಾರ್ಮೆಂಟ್ಸ್‌ನಲ್ಲಿ ಮಾನವ ಸಂಪನ್ಮೂಲ ವಿಭಾಗದಲ್ಲಿ ಯುವತಿ ಕೆಲಸ ಮಾಡುತ್ತಿದ್ದರು.ಎಂದಿನಂತೆ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ವೇಳೆ ದುಷ‌್ಕರ್ಮಿಗಳು ದಾಳಿ ನಡೆಸಿದ್ದಾರೆ. ಯುವತಿ ಕಿರುಚಾಡುವ ಶಬ್ದ ಕೇಳಿ ಸುತ್ತಮುತ್ತಲಿದ್ದ ಜನರು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಯುವತಿಯ ಮುಖದ ಬಲಭಾಗ, ಕತ್ತು, ಭುಜಗಳ ಮೇಲೆ ಸುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ಇದು ಮೇಲ್ನೋಟಕ್ಕೆ ಪ್ರೇಮ ಪ್ರಕರಣದಂತೆ ಕಂಡು ಬರುತ್ತಿದೆ. ಸಂತ್ರಸ್ತೆಯ ಹೇಳಿಕೆ ಪಡೆದು ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.