ADVERTISEMENT

ವಾಲ್ಮೀಕಿ ಸಮಾಜದ ಮೀಸಲಾತಿ ಹೆಚ್ಚಳಕ್ಕೆ ಕ್ರಮ: ಸಚಿವ ಬಿ.ಶ್ರೀರಾಮುಲು

​ಪ್ರಜಾವಾಣಿ ವಾರ್ತೆ
Published 11 ಜನವರಿ 2021, 13:45 IST
Last Updated 11 ಜನವರಿ 2021, 13:45 IST
ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು
ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು   

ಹಾವೇರಿ: ‘ವಾಲ್ಮೀಕಿ ಸಮಾಜದ ಮೀಸಲಾತಿಯನ್ನು ಶೇ 3ರಿಂದ ಶೇ 7.5ಕ್ಕೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಹೆಚ್ಚಳ ಮಾಡಲು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರು ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಿದ್ದಾರೆ’ ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ತಿಳಿಸಿದರು.

ಹಾವೇರಿ ನಗರದಲ್ಲಿ ಸೋಮವಾರ ನಡೆದ ‘ಜನಸೇವಕ ಸಮಾವೇಶ’ದಲ್ಲಿ ಅವರು ಮಾತನಾಡಿ, ಕಾಂಗ್ರೆಸ್‌ ಮತ್ತು ಬಿಜೆಪಿ ಸರ್ಕಾರಗಳನ್ನು ತುಲನೆ ಮಾಡಿದ ನೋಡಿದರೆ ಕಾಂಗ್ರೆಸ್‌ ಭ್ರಷ್ಟಾಚಾರದ ಪರ ಮತ್ತು ಬಿಜೆಪಿ ಅಭಿವೃದ್ಧಿ ಪರ ಎಂಬುದು ಗೊತ್ತಾಗುತ್ತದೆ. ‘ಕಾಂಗ್ರೆಸ್‌ ಮುಕ್ತ ಹಾವೇರಿ’ ಮಾದರಿಯಲ್ಲಿ ‘ಕಾಂಗ್ರೆಸ್‌ ಮುಕ್ತ ಕರ್ನಾಟಕ’ ಮಾಡಲು ಕಾರ್ಯಕರ್ತರು ಶ್ರಮಿಸಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT