
ಬ್ಯಾಡಗಿ: ಭಾರತದ ಆಧ್ಯಾತ್ಮಿಕ ಸರ್ವಶ್ರೇಷ್ಠ ಗುರುಸ್ವಾಮಿ ವಿವೇಕಾನಂದರ ಜನ್ಮದಿನದ ಸ್ಮರಣಾರ್ಥ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಸೋಮವಾರ ಕಾನೂನು ಸಾಕ್ಷರತಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ತಾಲ್ಲೂಕು ಕಾನೂನು ಸೇವೆಗಳ ಸಮಿತಿ ಹಾಗೂ ವಕೀಲರ ಸಂಘ ರಾಷ್ಟೀಯ ಯುವ ದಿನಾಚರಣೆ ಪ್ರಯುಕ್ತ ಏರ್ಪಡಿಸಿದ್ದ ಕಾನೂನು ಸಾಕ್ಷರತಾ ಕಾರ್ಯಕ್ರಮವನ್ನು ಹಿರಿಯ ನ್ಯಾಯಾಧೀಶೆ ರಾಜೇಶ್ವರಿ ಪುರಾಣಿಕ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು ಭಾರತಕ್ಕೆ ಮಾತ್ರವಲ್ಲದೆ ಪ್ರಪಂಚದ ಇತರ ದೇಶಗಳಿಗೆ ಅವರ ತತ್ವಗಳು, ಬದುಕಿನ ಹಾದಿ, ಯುವ ಜನತೆಗೆ ನೀಡಿದ ಸ್ಫೂರ್ತಿಯ ಕರೆಗಳಿಂದ ಅವರೊಬ್ಬ ಆಧ್ಯಾತ್ಮಿಕ ಗುರು ಹಾಗೂ ಆದರ್ಶ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ ಎಂದರು. ಅವರ ತತ್ವಾದರ್ಶಗಳನ್ನು ಯುವಕರು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಸ್ವಾಮಿ ವಿವೇಕಾನಂದರ ನನಸಾಗದ ಕನಸು ಮತ್ತು ಸದೃಢ ದೇಶ ನಿರ್ಮಾಣದಲ್ಲಿ ಯುವಕರ ಪಾತ್ರ ಕುರಿತು ಎಸ್.ಎಸ್.ಮೂಡುರ ಉಪನ್ಯಾಸ ನೀಡಿದರು. ಈ ವೇಳೆ ಕಿರಿಯ ನ್ಯಾಯಾಧೀಶ ಸುರೇಶ ವಗ್ಗನವರ, ಪಿ.ಸಿ.ಶೀಗಿಹಳ್ಳಿ, ರಾಜಣ್ಣ ನ್ಯಾಮತಿ, ವಕೀಲರ ಸಂಘದ ಅಧ್ಯಕ್ಷ ಆರ್.ಸಿ.ಶಿಡೆನೂರ, ಉಪಾಧ್ಯಕ್ಷ ಜಿ.ಬಿ.ಯಲಗಚ್ಚ, ಸಹ ಕಾರ್ಯದರ್ಶಿ ಎಂ.ಎಸ್.ಕುಮ್ಮೂರ, ಬಿ.ಎಸ್.ಚೊರಿ, ಎಂ.ಆರ್.ಹೊಮ್ಮರಡಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.