ರಾಣೆಬೆನ್ನೂರು: ‘ತಿರುಪತಿ ಬಾಲಾಜಿ ದೇವಸ್ಥಾನದ ಪವಿತ್ರ ಲಾಡು ಪ್ರಸಾದಕ್ಕೆ ಪ್ರಾಣಿಗಳ ಕೊಬ್ಬಿನ ಎಣ್ಣೆ ಬೆರೆಸುವವರ ವಿರುದ್ಧ ಸರ್ಕಾರ ಕಾನೂನು ಕ್ರಮ ಕೈಗೊಂಡು ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು’ ಎಂದು ಒತ್ತಾಯಿಸಿ ನಗರದಲ್ಲಿ ಮಂಗಳವಾರ ತಹಶೀಲ್ದಾರ್ ಕಚೇರಿಯ ಎದುರು ಕರ್ನಾಟಕ ದೇವಸ್ಥಾನ- ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘ ತಾಲ್ಲೂಕು ಘಟಕದಿಂದ ಮಂಗಳವಾರ ತಹಶೀಲ್ದಾರ್ ಆರ್.ಎಚ್. ಭಾಗವಾನ್ ಅವರಿಗೆ ಮನವಿ ಸಲ್ಲಿಸಲಾಯಿತು.
ವರ್ತಕರ ಸಂಘದ ಅಧ್ಯಕ್ಷ ಜಿ.ಜಿ. ಹೊಟ್ಟಿಗೌಡ್ರ ಮಾತನಾಡಿ, ‘ಆಂಧ್ರ ಪ್ರದೇಶದ ತಿರುಪತಿ ಬಾಲಾಜಿ ದೇವಸ್ಥಾನವು ಪ್ರಪಂಚದಲ್ಲಿಯೇ ಕೋಟಿಗಟ್ಟಲೇ ಭಕ್ತರ ಆರಾಧನೆಯ ಸ್ಥಳವಾಗಿದೆ. ಇದನ್ನು ವಿಷ್ಣುವಿನ ನಿಜವಾದ ಭೂವೈಕುಂಠವೆಂದು ಪರಿಗಣಿಸಲಾಗಿದೆ. ಇಂತಹ ಪುಣ್ಯಭೂಮಿಯಲ್ಲಿ ಪ್ರಸಾದದ ಲಾಡುಗಳಲ್ಲಿ ಪ್ರಾಣಿಗಳ ಕೊಬ್ಬಿನ ಎಣ್ಣೆಯನ್ನು ಬಳಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಅಲ್ಲಿನ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರೇ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಇದರಿಂದ ದೇಶಾದ್ಯಂತ ಹಿಂದೂ ಸಮಾಜದಲ್ಲಿ ತೀವ್ರ ಆಕ್ರೋಶ ಉಂಟಾಗಿದೆ. ಹೀಗಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ವಿವಿಧ ಸಂಘಟನೆಗಳ ಪ್ರದಾಧಿಕಾರಿಗಳು ಒತ್ತಾಯಿಸಿದರು.
ಹಿಂದೂ ಜಾಗರಣ ಸಮಿತಿ ಸದಸ್ಯರಾದ ಪ್ರಕಾಶ ಬುರಡಿಕಟ್ಟಿ, ವರ್ತಕ ಬಿ.ಸಿ. ನಂದೀಹಳ್ಳಿ, ಪ್ರಸನ್ನ ಬಣಕಾರ, ಮಲ್ಲೇಶಪ್ಪ, ಸಚಿನ ದಾನಪ್ಪನವರ, ಪಿ.ಬಿ. ಪಾಟೀಲ, ಪರಮೇಶ, ಶಿವಾನಂದಪ್ಪ, ವಿಜಯಕುಮಾರ ಹುಗ್ಗಿ, ಸಿದ್ದು ಹಾವೇರಿ, ಸುರೇಶ ಧುಳೆಹೊಳಿ, ಹ.ಬ. ಪೂಜಾರ, ಅಂಕಲಕೋಟಿ, ಕಿರಣ ಅಂತರವಳ್ಳಿ, ಶಿವಾನಂದ ಸಾಲಗೇರಿ, ಹನುಮಂತಪ್ಪ ಹೆದ್ದೇರಿ, ಶಿವಯೋಗಿ ಹಳ್ಳಳ್ಳಿ, ಶಿವಾಜಿ ಆರೇರ, ಹನುಮಂತಪ್ಪ ಮಾಗೋಡ, ಮಾಲತೇಶ ತಸಲ್ಧಾರ್, ಬಸವರಾಜ ಅಂತರವಳ್ಳಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.