ADVERTISEMENT

ಹಾವೇರಿ: ಸರಳ, ಶಾಂತಿಯುತ ಆಚರಣೆಗೆ ಜಿಲ್ಲಾಧಿಕಾರಿ ಸಲಹೆ

ಗಣೇಶೋತ್ಸವ, ಮೊಹರಂ: ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಶಾಂತಿಸಭೆ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2020, 13:58 IST
Last Updated 19 ಆಗಸ್ಟ್ 2020, 13:58 IST
ಹಾವೇರಿ ನಗರದ ಗುರುಭವನದಲ್ಲಿ ಬುಧವಾರ ಏರ್ಪಡಿಸಿದ್ದ ಶಾಂತಿಸಭೆಯಲ್ಲಿ ಜಿಲ್ಲಾಧಿಕಾರಿ ಸಂಜಯ ಶೆಟ್ಟಣ್ಣವರ ಮಾತನಾಡಿದರು
ಹಾವೇರಿ ನಗರದ ಗುರುಭವನದಲ್ಲಿ ಬುಧವಾರ ಏರ್ಪಡಿಸಿದ್ದ ಶಾಂತಿಸಭೆಯಲ್ಲಿ ಜಿಲ್ಲಾಧಿಕಾರಿ ಸಂಜಯ ಶೆಟ್ಟಣ್ಣವರ ಮಾತನಾಡಿದರು   

ಹಾವೇರಿ: ಕೊರೊನಾ ಸೋಂಕು ಹರಡುತ್ತಿರುವ ಸಂದರ್ಭದಲ್ಲಿ ಮೊಹರಂಹಾಗೂ ಗಣೇಶೋತ್ಸವಗಳನ್ನು ಸರಳವಾಗಿ, ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಶಾಂತಿಯುತವಾಗಿ ಆಚರಿಸಲು ಜಿಲ್ಲಾಧಿಕಾರಿ ಸಂಜಯ ಶೆಟ್ಟಣ್ಣವರ ಹೇಳಿದರು.

ಆ.22ರಂದು ಗಣೇಶೋತ್ಸವ ಹಾಗೂ ಆ.30ರಂದು ಮೊಹರಂ ಕೊನೇ ದಿನ ಹಿನ್ನೆಲೆಯಲ್ಲಿ ಜಿಲ್ಲಾ ಆಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಬುಧವಾರ ಹಾವೇರಿ ಗುರುಭವನದಲ್ಲಿ ಏರ್ಪಡಿಸಿದ್ದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅನುಮತಿ ಪಡೆದ ಸಮಿತಿಗಳು ಗಣೇಶ ಪ್ರತಿಷ್ಠಾಪಿಸಿದ ಸ್ಥಳದಲ್ಲ್ಲಿ ಹೆಚ್ಚು ಜನರು ಸೇರದಂತೆ ನೋಡಿಕೊಳ್ಳಬೇಕು. ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನರ್ ವ್ಯವಸ್ಥೆ ಮಾಡಬೇಕು ಮತ್ತು ಎಲ್ಲರೂ ಮಾಸ್ಕ್‌ ಧರಿಸುವಂತೆ ನೋಡಿಕೊಳ್ಳಬೇಕು. ಪರಿಸರ ಸ್ನೇಹಿ ಮೂರ್ತಿಗಳ ಪೂಜೆಗೆ ಆದ್ಯತೆ ನೀಡಿ ಎಂದು ಸಲಹೆ ನೀಡಿದರು.

ADVERTISEMENT

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜು ಮಾತನಾಡಿ, ಕೋವಿಡ್ ನಿಯಂತ್ರಿಸಲು ಹಬ್ಬಗಳನ್ನು ಸರಳವಾಗಿ ಆಚರಣೆ ಮಾಡಬೇಕು. ಸಾರ್ವಜನಿಕರು ತಾವೇ ಸ್ವಯಂ ನಿರ್ಬಂಧ ಹಾಕಿಕೊಂಡು ಶಾಂತಿಯುತವಾಗಿ ಆಚರಣೆ ಮಾಡಿ ಎಂದರು.

ನಗರಸಭೆ ಆಯುಕ್ತ ಬಸವರಾಜ ಜಿದ್ದಿ ಮಾತನಾಡಿ, ರಸ್ತೆಗಳಲ್ಲಿ ಗುಂಡಿಗಳನ್ನು ಮುಚ್ಚಲು ಕ್ರಮವಹಿಸಲಾಗುವುದು. ಗಣೇಶ ಮೂರ್ತಿ ವಿಸರ್ಜನೆಗೆ ನಗರಸಭೆಯಿಂದ ತಾತ್ಕಾಲಿಕ ನೀರಿನ ಹೊಂಡದ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮತ್ತುಜಿಲ್ಲಾ ಅಗ್ನಿಶಾಮಕ ಅಧಿಕಾರಿ ಸೋಮಶೇಖರ ಅಗಡಿ ಮಾತನಾಡಿದರು.

ಸಭೆಯಲ್ಲಿ ನಗರಸಭೆ ಸದಸ್ಯ ಸಂಜೀವಕುಮಾರ ನೀರಲಗಿ, ಉಪವಿಭಾಗಾಧಿಕಾರಿ ಡಾ.ದೀಲಿಷ್ ಶಶಿ, ಹಾವೇರಿ ಪ್ರಭಾರ ತಹಶೀಲ್ದಾರ್ ಶರಣಮ್ಮ ಕಾರಿ, ಡಿವೈಎಸ್ಪಿ ವಿಜಯಕುಮಾರ ಸಂತೋಷ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.