ADVERTISEMENT

ಬ್ಯಾಡಗಿ | ಮೆಣಸಿನಕಾಯಿ ಆವಕದಲ್ಲಿ ಮತ್ತೆ ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2023, 14:54 IST
Last Updated 30 ಅಕ್ಟೋಬರ್ 2023, 14:54 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬ್ಯಾಡಗಿ: ಇಲ್ಲಿಯ ಕೃಷಿ ಉತ್ಪನ್ನ ಮಾರುಕಟ್ಟೆಗೆ ಸೋಮವಾರ 3,195 ಕ್ವಿಂಟಲ್ ಮೆಣಸಿನಕಾಯಿ ಮಾರಾಟಕ್ಕೆ ತರಲಾಗಿದ್ದು, ಆವಕದಲ್ಲಿ ಮತ್ತೆ ಹೆಚ್ಚಳವಾಗಿದೆ.

ಕಳೆದ ಗುರುವಾರ ಮಾರುಕಟ್ಟೆಗೆ 2,185 ಕ್ವಿಂಟಲ್ ಮೆಣಸಿನಕಾಯಿ ಆವಕವಾಗಿತ್ತು. ಬಳ್ಳಾರಿ ಜಿಲ್ಲೆಯ ಕೆಲವು ಭಾಗದಲ್ಲಿ ನೀರಾವರಿಗೆ ಬೆಳೆದಿರುವ ಮೆಣಸಿನಕಾಯಿ ಮಾರಾಟಕ್ಕೆ ತರಲಾಗಿದೆ. ಹೀಗಾಗಿ ಇಂದಿನ ಆವಕದಲ್ಲಿ ಹೆಚ್ಚಳವಾಗಿದೆ ಎನ್ನುತ್ತಾರೆ ಇಲ್ಲಿಯ ವರ್ತಕರು.

ಹೆಚ್ಚಿನ ತೇವಾಂಶ ಮತ್ತು ಕಡಿಮೆ ಗುಣಮಟ್ಟವಿರುವ 172 ಲಾಟ್‌ಗಳಿಗೆ ಸೋಮವಾರ ಟೆಂಡರ್‌ ನಮೂದಿಸಿಲ್ಲ. ಎರಡು ಚೀಲ ಡಬ್ಬಿ ಮೆಣಸಿನಕಾಯಿ ಕ್ವಿಂಟಲ್‌ಗೆ ₹59 ಸಾವಿರದಂತೆ ಮಾರಾಟವಾಗಿದ್ದು, ಕಳೆದ ಗುರುವಾರಕ್ಕಿಂತ ₹6 ಸಾವಿರ ಹೆಚ್ಚಳ ಕಂಡಿದೆ. 24 ಚೀಲ ಕಡ್ಡಿ ಮೆಣಸಿನಕಾಯಿ ಪ್ರತಿ ಕ್ವಿಂಟಲ್‌ಗೆ ₹52,399ರಂತೆ, ಗುಂಟೂರ ತಳಿ ₹18,699ರಂತೆ ಗರಿಷ್ಠ ಬೆಲೆಯಲ್ಲಿ ಮಾರಾಟವಾಗಿದ್ದು, ತುಸು ಹೆಚ್ಚಳವಾಗಿದೆ. ಸರಾಸರಿ ಬೆಲೆಯಲ್ಲಿ ಬ್ಯಾಡಗಿ ಡಬ್ಬಿ ₹46,089, ಕಡ್ಡಿ ₹35,069 ಹಾಗೂ ಗುಂಟೂರ ತಳಿ ₹16,009ರಂತೆ ಮಾರಾಟವಾಗಿದ್ದು, ತುಸು ಹೆಚ್ಚಳವಾಗಿದೆ. ಇಂದಿನ ಟೆಂಡರ್ ಪ್ರಕ್ರಿಯೆಯಲ್ಲಿ ಒಟ್ಟು 213 ಖರೀದಿ ವರ್ತಕರು ಪಾಲ್ಗೊಂಡಿದ್ದರು ಎಂದು ಎಪಿಎಂಸಿ ಮೂಲಗಳು ತಿಳಿಸಿವೆ.

ADVERTISEMENT

ಸೋಮವಾರದ ಮಾರುಕಟ್ಟೆ ದರ
ಕನಿಷ್ಠ – ಗರಿಷ್ಠ
ಬ್ಯಾಡಗಿ ಕಡ್ಡಿ : ₹2,509 - ₹52,399
ಬ್ಯಾಡಗಿ ಡಬ್ಬಿ: ₹3,689 - ₹59,000
ಗುಂಟೂರ ತಳಿ: ₹1,159 - ₹18,699

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.