ADVERTISEMENT

ಅಂಗನವಾಡಿ ಬಲಪಡಿಸಲು ಎಐಟಿಯುಸಿ ಆಗ್ರಹ

ಸರ್ಕಾರಿ ಶಾಲೆಯಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಕ್ಕೆ ವಿರೋಧ: ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2020, 13:21 IST
Last Updated 21 ಸೆಪ್ಟೆಂಬರ್ 2020, 13:21 IST
ಸರ್ಕಾರಿ ಶಾಲೆಯಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಆರಂಭಿಸುವ ಕ್ರಮ ವಿರೋಧಿಸಿ ಎಐಟಿಯುಸಿ ನೇತೃತ್ವದಲ್ಲಿ ಹಾವೇರಿ ನಗರದಲ್ಲಿ ಸೋಮವಾರ ತಹಶೀಲ್ದಾರ್‌ ಶಂಕರ್‌ ಅವರಿಗೆ ಮನವಿ ಸಲ್ಲಿಸಲಾಯಿತು 
ಸರ್ಕಾರಿ ಶಾಲೆಯಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಆರಂಭಿಸುವ ಕ್ರಮ ವಿರೋಧಿಸಿ ಎಐಟಿಯುಸಿ ನೇತೃತ್ವದಲ್ಲಿ ಹಾವೇರಿ ನಗರದಲ್ಲಿ ಸೋಮವಾರ ತಹಶೀಲ್ದಾರ್‌ ಶಂಕರ್‌ ಅವರಿಗೆ ಮನವಿ ಸಲ್ಲಿಸಲಾಯಿತು    

ಹಾವೇರಿ: ಸರ್ಕಾರಿಶಾಲೆಯಲ್ಲಿ ಎಲ್‌.ಕೆ.ಜಿ., ಯು.ಕೆ.ಜಿ. ಆರಂಭಿಸುವುದನ್ನು ಸರ್ಕಾರ ಕೈಬಿಟ್ಟು, ಅಂಗನವಾಡಿಗಳನ್ನು ಬಲಪಡಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.

ನಗರದ ತಹಶೀಲ್ದಾರ್‌ ಕಚೇರಿ ಮುಂಭಾಗ ಸಾಂಕೇತಿಕ ಪ್ರತಿಭಟನೆ ಮಾಡಿ, ತಹಶೀಲ್ದಾರ್‌ ಶಂಕರ್‌ ಅವರ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ಕರ್ನಾಟಕ ರಾಜ್ಯ ಶಿಕ್ಷಣ ನೀತಿ 2016 ಹಾಗೂ ಕೇಂದ್ರದ ರಾಷ್ಟ್ರೀಯ ಶಿಕ್ಷಣ ನೀತಿ 2020ರ ಅಡಿಯಲ್ಲಿ ಅಂಗನವಾಡಿ ಕೇಂದ್ರಗಳನ್ನು ಬಲವರ್ಧನೆಗೊಳಿಸುವ ಪ್ರಸ್ತಾಪವಿರುವುದು ಸ್ವಾಗತಾರ್ಹ. ಆದರೆ, ರಾಜ್ಯ ಸರ್ಕಾರ ಸರ್ಕಾರಿ ಶಾಲೆಯಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಆರಂಭಿಸುವ ಪ್ರಕ್ರಿಯೆಯನ್ನು ಆರಂಭಿಸಿರುವುದು ವಿಷಾದನೀಯ ಎಂದರು.

ADVERTISEMENT

ಈಗಾಗಲೇ ಪ್ರಾಯೋಗಿಕವಾಗಿ ಕೆಲವು ಶಾಲೆಗಳಲ್ಲಿ ಎಲ್‌ಕೆಜಿ ಹಾಗೂ ಯುಕೆಜಿ ತರಗತಿಗಳನ್ನು ಆರಂಭಿಸಿದ ಪರಿಣಾಮ ಅಂಗನವಾಡಿಗಳನ್ನು ಮುಚ್ಚುವ ಪರಿಸ್ಥಿತಿ ಎದುರಾಗಿದೆ. ಆದ್ದರಿಂದ ಪರ್ಯಾಯವಾಗಿ ಐಸಿಡಿಎಸ್ ಯೋಜನೆ ಉಳಿಸಲು ಎಲ್‌ಕೆಜಿ ಮತ್ತು ಯುಕೆಜಿಗಳನ್ನು ಅಂಗನವಾಡಿ ಕೇಂದ್ರಗಳಲ್ಲಿ ಆರಂಭಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಎಐಟಿಯುಸಿ ಜಿಲ್ಲಾ ಸಂಚಾಲಕ ಜಿ.ಡಿ.ಪೂಜಾರ, ನಾಗರತ್ನಾ ರಾಣಿಬೆನ್ನೂರು, ಬೇಬಿ ನಡುವಿನಮಠ, ಸುಧಾ ರಾಶಿನಕರ್, ಶೆಟ್ಟರ್, ಮಂಜುಳಾ ಕ್ಯಾಯಕದ, ಕುಲಕರ್ಣಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.