ಪ್ರಾತಿನಿಧಿಕ ಚಿತ್ರ
– ಪ್ರಜಾವಾಣಿ ಚಿತ್ರ
ಹಾವೇರಿ: ಹಾನಗಲ್ ತಾಲ್ಲೂಕಿನ ಅಕ್ಕಿಆಲೂರು ಗ್ರಾಮ ಪಂಚಾಯಿತಿಯಲ್ಲಿ ಗುರುವಾರ ನಡೆದ ಸಾಮಾನ್ಯ ಸಭೆಯಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು ಗಲಾಟೆಯಾಗಿದೆ.
‘ಗ್ರಾಮ ಪಂಚಾಯಿತಿಯಲ್ಲಿ ಅಕ್ರಮಗಳು ನಡೆದಿವೆ. ಖಾಸಗಿ ವ್ಯಕ್ತಿಗಳು ಪಂಚಾಯಿತಿಯೊಳಗೆ ಬಂದು ಸದಸ್ಯರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ’ ಎಂದು ಆರೋಪಿಸಿ ಒಂದು ಬಣದ ಸದಸ್ಯರು ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದಾರೆ.
‘ಪಿಡಿಒ ಹಾಗೂ ಇತರರು ಸೇರಿಕೊಂಡು, ಸಾಕಷ್ಟು ಅಕ್ರಮಗಳನ್ನು ಮಾಡಿದ್ದಾರೆ. ಅವರ ವಿರುದ್ಧ ಲೋಕಾಯುಕ್ತ ಪೊಲೀಸರಿಗೂ ದೂರು ನೀಡಲಾಗಿದೆ. ಪ್ಲೇಟ್ ಹೆಸರಿನಲ್ಲಿಯೂ ₹ 100 ವಸೂಲಿ ಮಾಡಿದ್ದಾರೆ. ಇದರ ವಿರುದ್ಧ ಪಂಚಾಯಿತಿ ಎದುರು ಶುಕ್ರವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು ಸದಸ್ಯರೊಬ್ಬರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.