ADVERTISEMENT

ಅಂಬೇಡ್ಕರ್‌ ಆದರ್ಶ ಪಾಲಿಸಿ: ಶಾಸಕ ನೆಹರು ಓಲೇಕಾರ

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2020, 11:27 IST
Last Updated 14 ಏಪ್ರಿಲ್ 2020, 11:27 IST
ಹಾವೇರಿಯ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಡಾ.ಬಿ.ಆರ್‌. ಅಂಬೇಡ್ಕರ್‌ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ನೆಹರು ಓಲೇಕಾರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಇದ್ದಾರೆ 
ಹಾವೇರಿಯ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಡಾ.ಬಿ.ಆರ್‌. ಅಂಬೇಡ್ಕರ್‌ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ನೆಹರು ಓಲೇಕಾರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಇದ್ದಾರೆ    

ಹಾವೇರಿ: ಕೋವಿಡ್ ಹಿನ್ನೆಲೆಯಲ್ಲಿ ಭಾರತರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 129ನೇ ಜಯಂತಿಯನ್ನು ಮಂಗಳವಾರ ಜಿಲ್ಲಾಡಳಿತದಿಂದ ಸರಳವಾಗಿ ಆಚರಿಸಲಾಯಿತು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಹಾಗೂ ಶಾಸಕ ನೆಹರು ಓಲೇಕಾರ ನಮನ ಸಲ್ಲಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಧಿಕಾರಿಗಳು, ಗಣ್ಯರು ಪುಷ್ಪನಮನ ಸಲ್ಲಿಸಿದರು.

ADVERTISEMENT

ಶಾಸಕ ನೆಹರು ಓಲೇಕಾರ ಮಾತನಾಡಿ, ಅಂಬೇಡ್ಕರ್ ಅವರು ಮಹಾನ್ ಮಾನವತಾವಾದಿ, ಮುತ್ಸದ್ದಿ, ಜ್ಞಾನದ ಭಂಡಾರ, ಸಾಮಾಜಿಕ ಅಸಮಾನತೆ ತೊಡೆದು ಹಾಕಲು ಶ್ರಮಿಸಿದವರು. ಶಿಕ್ಷಣ, ಸಂಘಟನೆ, ಹೋರಾಟದ ಮೂಲಕ ಸಾಮಾಜಿಕ ನ್ಯಾಯ ಮತ್ತು ತಮ್ಮ ಹಕ್ಕುಗಳನ್ನು ಪಡೆಯಲು ಕರೆ ಕೊಟ್ಟರು. ಅವರ ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ ಹಾಗೂ ಸಾಧನೆ ಕುರಿತು ವಿವರಿಸುತ್ತಾ, ಜಾತಿ ರಹಿತ, ವರ್ಗ ರಹಿತ, ಲಿಂಗ ಸಮಾನತೆ, ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಮಹಾನ್ ಸಮಾಜ ಸುಧಾರಕ ಡಾ.ಬಿ.ಆರ್.ಅಂಬೇಡ್ಕರ್‌ ಎಂದು ಬಣ್ಣಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಮೇಶ ದೇಸಾಯಿ ಮಾತನಾಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಯೋಗೇಶ್ವರ, ಸಮಾಜ ಕಲ್ಯಾಣಾಧಿಕಾರಿ ಚೈತ್ರಾ ಹಾಗೂ ವಿವಿಧ ಇಲಾಖಾಧಿಕಾರಿಗಳು , ಸಮಾಜದ ಮುಖಂಡರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.