ADVERTISEMENT

ಕೇಂದ್ರದಿಂದ ರೈತ ವಿರೋಧಿ ಕಾಯ್ದೆ: ಕರವೇ ಖಂಡನೆ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2020, 11:47 IST
Last Updated 10 ಡಿಸೆಂಬರ್ 2020, 11:47 IST
ರೈತ ವಿರೋಧಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯಬೇಕು ಎಂದು ಕರವೇ ಮುಖಂಡರು ಹಾವೇರಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌.ಯೋಗೇಶ್ವರ ಅವರಿಗೆ ಮನವಿ ಸಲ್ಲಿಸಿದರು 
ರೈತ ವಿರೋಧಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯಬೇಕು ಎಂದು ಕರವೇ ಮುಖಂಡರು ಹಾವೇರಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌.ಯೋಗೇಶ್ವರ ಅವರಿಗೆ ಮನವಿ ಸಲ್ಲಿಸಿದರು    

ಹಾವೇರಿ: ರೈತ ವಿರೋಧಿ ತಿದ್ದುಪಡಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯಲು ರಾಷ್ಟ್ರಪತಿಯವರು ಪ್ರಧಾನಿ ಮೋದಿ ಅವರಿಗೆ ತಿಳಿಸಬೇಕು ಎಂದು ಒತ್ತಾಯಿಸಿ ಕರವೇ ಮುಖಂಡರು ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌.ಯೋಗೇಶ್ವರ ಅವರಿಗೆ ಮನವಿ ಸಲ್ಲಿಸಿದರು.

‘ರೈತರು ದೆಹಲಿಯಲ್ಲಿ ನಡೆಸುತ್ತಿರುವ ಐತಿಹಾಸಿಕ ಹೋರಾಟವನ್ನು ಇಡೀ ದೇಶದ ಜನರು ಬೆಂಬಲಿಸುತ್ತಿದ್ದಾರೆ. ಈ ಚಳವಳಿಯಲ್ಲಿ ಪಾಲ್ಗೊಂಡಿರುವ ನೂರಾರು ರೈತ ಸಂಘಟನೆಗಳು ಕೇಳುತ್ತಿರುವ ಬೇಡಿಕೆಗಳು ನ್ಯಾಯಯುತವಾಗಿವೆ. ಒಕ್ಕೂಟ ಸರ್ಕಾರ ಇತ್ತೀಚೆಗೆ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆಗಳು ಜನವಿರೋಧಿ, ರೈತ ವಿರೋಧಿಯಾಗಿವೆ. ಇವುಗಳನ್ನು ಹಿಂದಕ್ಕೆ‌ ಪಡೆಯದಿದ್ದರೆ, ರೈತರ ಬಾಳು ನರಕವಾಗಲಿದೆ, ರೈತರ ಆತ್ಮಹತ್ಯೆಗಳು ದುಪ್ಪಟ್ಟಾಗಲಿವೆ ಎಂದು ಮನವಿಯಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸಂಘಟನಾ ಕಾರ್ಯದರ್ಶಿ ಕರಿಬಸಯ್ಯ ಬಸರೀಹಳ್ಳಿಮಠ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಶವಂತಗೌಡ ದೊಡ್ಡಗೌಡ್ರ, ಜಿಲ್ಲಾ ಪ್ರಧಾನ ಸಂಚಾಲಕ ಯಲ್ಲಪ್ಪ ಮರಾಠೆ, ಹಾಲೇಶ ಹಾಲಣ್ಣನವರ ಮುಂತಾದವರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.