ADVERTISEMENT

ಹಾವೇರಿ: ಎಪಿಎಂಸಿ ಚುನಾವಣೆಗೆ ಅಧಿಕಾರಿಗಳ ನೇಮಕ

​ಪ್ರಜಾವಾಣಿ ವಾರ್ತೆ
Published 26 ಮೇ 2020, 13:55 IST
Last Updated 26 ಮೇ 2020, 13:55 IST

ಹಾವೇರಿ: ಜಿಲ್ಲೆಯ ಏಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಅಧ್ಯಕ್ಷ, ಉಪಾಧ್ಯಕ್ಷರ ಎರಡನೇ ಅವಧಿ ಕೊನೆಗೊಳ್ಳಲಿದ್ದು, ಮುಂದಿನ 20 ತಿಂಗಳ ಕೊನೆಯ ಅವಧಿಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ನಡೆಸಲು ಚುನಾವನಾ ಅಧ್ಯಕ್ಷಾಧಿಕಾರಿಗಳನ್ನು ನೇಮಕ ಮಾಡಿ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಆದೇಶ ಹೊರಡಿಸಿದ್ದಾರೆ.

ಜೂನ್ 15ರಂದು ಹಿರೇಕೆರೂರು, ಜೂನ್ 16ರಂದು ರಾಣೇಬೆನ್ನೂರು, ಹಾನಗಲ್, ಬ್ಯಾಡಗಿ, ಜೂನ್ 20ರಂದು ಶಿಗ್ಗಾವಿ, ಸವಣೂರು ಹಾಗೂ ಜೂನ್ 22ರಂದು ಹಾವೇರಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ 20 ತಿಂಗಳ ಅವಧಿ ಪೂರ್ಣಗೊಳ್ಳಲಿದೆ. ತಲಾ 20 ತಿಂಗಳಂತೆ ಈಗಾಗಲೇ ಎರಡು ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಜರುಗಿದ್ದು, ಕೊನೆಯ ಅವಧಿಯ ಮುಂದಿನ 20 ತಿಂಗಳ ಅವಧಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಆಯ್ಕೆ ಮಾಡಲು ಚುನಾವಣೆ ನಡೆಸಬೇಕಾಗಿದೆ. 2ನೇ ಅವಧಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಅಧಿಕಾರ ಅವಧಿ ಮುಗಿಯವ ಮುನ್ನ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸಲು ಆಯಾ ತಾಲ್ಲೂಕು ತಹಶೀಲ್ದಾರಗಳನ್ನು ಪ್ರಿಸೈಡಿಂಗ್ ಅಧಿಕಾರಿಗಳನ್ನಾಗಿ ನಿಯೋಜಿಸಿ ಜಿಲ್ಲಾ ಚುನಾವಣಾಧಿಕಾರಿ ಆದೇಶ ಹೊರಡಿಸಿ, ನಿಗದಿತ ಅವಧಿಯೊಳಗೆ ಚುನಾವಣೆ ನಡೆಸಲು ಆದೇಶಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT