ಹಾವೇರಿ: ರಾಜ್ಯದಲ್ಲಿ ನದಾಫ/ಪಿಂಜಾರ ಜನಾಂಗವು ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಹಾಗೂ ಸಾಮಾಜಿಕವಾಗಿ, ರಾಜಕೀಯವಾಗಿ ತುಂಬಾ ಹಿಂದುಳಿದಿದೆ. ಈ ಜನಾಂಗದ ಸರ್ವತೋಮುಖ ಪ್ರಗತಿಗಾಗಿ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು ಎಂದು ‘ಕರ್ನಾಟಕ ರಾಜ್ಯ ನದಾಫ/ಪಿಂಜಾರ ಸಂಘದ ಹಾವೇರಿ ಜಿಲ್ಲಾ ಘಟಕದ ಪದಾಧಿಕಾರಿಗಳು ಮಂಗಳವಾರ ಜಿಲ್ಲಾಧಿಕಾರಿ ಸಂಜಯ ಶೆಟ್ಟಣ್ಣವರ ಅವರಿಗೆ ಮನವಿ ಸಲ್ಲಿಸಿದರು.
ಕೇಂದ್ರ ಸರ್ಕಾರವು ಒಬಿಸಿ ಪಟ್ಟಿಯಲ್ಲಿ ನಮ್ಮ ಜನಾಂಗವನ್ನು ಸೇರ್ಪಡೆ ಮಾಡಿದ್ದು, ರಾಜ್ಯದಲ್ಲಿ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದಿರುವ ಕಾಯ್ದೆಯಲ್ಲಿಯೂ ಸಹ ನಮ್ಮ ಜನಾಂಗವನ್ನು ಅತ್ಯಂತ ಹಿಂದುಳಿದಿರುವ ಬಗ್ಗೆ ಗುರುತಿಸಲಾಗಿದೆ. ಅಲೆಮಾರಿ ಎಂದು ಗುರುತಿಸಿರುವ ಈ ಸಮುದಾಯದಲ್ಲಿ ಇಲ್ಲಿಯವರೆಗೂ ಒಬ್ಬ ಐಎಎಸ್ ಅಧಿಕಾರಿಯಾಗಲಿ, ಐಪಿಎಸ್ ಅಧಿಕಾರಿಯಾಗಲಿ ಆಯ್ಕೆಯಾಗಿರುವುದಿಲ್ಲ ಎಂದು ತಿಳಿಸಿದ್ದಾರೆ.
ಸಂಘದ ಅಧ್ಯಕ್ಷ ಆರ್.ಜಿ.ಗುಡಗೇರಿ, ಹುಸೇನಸಾಬ ದೇವಿಹೂಸೂರ, ಎಂ.ಎಫ್.ಇಂಗಳಗಿ, ಉಪಾಧ್ಯಕ್ಷ ಮರ್ದಾನಸಾಬ ಸುಳ್ಳಳ್ಳಿ, ಕಾಸೀಂಸಾಬ್ ಮುಂದಿನಮನಿ, ನೂರ್ ಅಹಮದ್ ಕರ್ಜಗಿ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.