ADVERTISEMENT

ಸರ್ವಜ್ಞ ಐಕ್ಯಸ್ಥಳದ ಅಭಿವೃದ್ಧಿಗೆ ಮನವಿ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2021, 16:26 IST
Last Updated 14 ಆಗಸ್ಟ್ 2021, 16:26 IST
ಬ್ಯಾಡಗಿ ಪಟ್ಟಣದ ಬಿಇಎಸ್ ವರ್ತಕರ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್.ರಂಗನಾಥನ್ ಅವರ 129ನೇ ಜನ್ಮದಿನದ ಪ್ರಯುಕ್ತ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು
ಬ್ಯಾಡಗಿ ಪಟ್ಟಣದ ಬಿಇಎಸ್ ವರ್ತಕರ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್.ರಂಗನಾಥನ್ ಅವರ 129ನೇ ಜನ್ಮದಿನದ ಪ್ರಯುಕ್ತ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು   

ರಟ್ಟೀಹಳ್ಳಿ: ಮಾಸೂರು ಗ್ರಾಮದ ಸರ್ವಜ್ಞ ಪ್ರಾಧಿಕಾರಕ್ಕೆ ಇದುವರೆಗೂ ಕಾಯಂ ಆಯುಕ್ತರನ್ನು ನೇಮಿಸಿಲ್ಲ, ಜತೆಗೆ ಸರ್ವಜ್ಞನ ಐಕ್ಯಸ್ಥಳದ ಅಭಿವೃದ್ಧಿಯಾಗಿಲ್ಲ। ಇಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ ಶೆಟ್ಟಿ ಬಣ)ಯ ಸದಸ್ಯರು ಹಾಗೂ ಮಾಸೂರು ಗ್ರಾಮಸ್ಥರು ಕೃಷಿ ಸಚಿವ ಬಿ.ಸಿ.ಪಾಟೀಲ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.

ವೇದಿಕೆಯ ಮಾಸೂರು ಗ್ರಾಮ ಘಟಕದ ಅಧ್ಯಕ್ಷ ಸಂತೋಷ ವಾಲ್ಮೀಕಿ, ತಾಲ್ಲೂಕು ಘಟಕದ ಅಧ್ಯಕ್ಷ ಕರಿಯಪ್ಪ ಕೊರವರ, ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ ಓಲೇಕಾರ, ಉಪಾಧ್ಯಕ್ಷ ಷಣ್ಮುಖಮೆಣಸಿನಹಾಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಲ್ಲಪ್ಪ ಮರಾಠೆ, ಜಿಲ್ಲಾ ಯುವ ಘಟಕದ ಉಪಾಧ್ಯಕ್ಷ ಯೂಸೂಫ್ ಸೈಕಲಗಾರ, ಶಶಿಕುಮಾರ ನಾಮದೇವ, ಸಿದ್ದು ಹಿರೇಮಠ, ಮೂಕೇಶ ಬೆನಗೇರಿ, ವೀರೇಶಪೂಜಾರ,ರಾಜುಹಿರೇಮಠ, ಮಂಜು ಕಲಾಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT