ADVERTISEMENT

ಹಾವೇರಿ: ನ್ಯಾಯಾಲಯದಲ್ಲಿ ಕನ್ನಡ ಬಳಕೆಗೆ ಮನವಿ 

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2021, 13:21 IST
Last Updated 4 ಮಾರ್ಚ್ 2021, 13:21 IST
ಹಾವೇರಿ ಜಿಲ್ಲೆಯ ನ್ಯಾಯಾಲಯಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಕನ್ನಡ ಭಾಷೆ ಬಳಕೆ ಮಾಡುವ ಕುರಿತಂತೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರಾದ ಎಸ್.ಎಚ್.ರೇಣುಕಾದೇವಿ ಅವರಿಗೆ ಕನ್ನಡ ಜಾಗೃತಿ ಸಮಿತಿ ಜಿಲ್ಲಾ ಘಟಕದ ಸದಸ್ಯರು ಮನವಿ ಸಲ್ಲಿಸಿದರು
ಹಾವೇರಿ ಜಿಲ್ಲೆಯ ನ್ಯಾಯಾಲಯಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಕನ್ನಡ ಭಾಷೆ ಬಳಕೆ ಮಾಡುವ ಕುರಿತಂತೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರಾದ ಎಸ್.ಎಚ್.ರೇಣುಕಾದೇವಿ ಅವರಿಗೆ ಕನ್ನಡ ಜಾಗೃತಿ ಸಮಿತಿ ಜಿಲ್ಲಾ ಘಟಕದ ಸದಸ್ಯರು ಮನವಿ ಸಲ್ಲಿಸಿದರು   

ಹಾವೇರಿ: ಜಿಲ್ಲೆಯ ನ್ಯಾಯಾಲಯಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಕನ್ನಡ ಭಾಷೆ ಬಳಕೆ ಮಾಡುವ ಕುರಿತಂತೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರಾದ ಎಸ್.ಎಚ್.ರೇಣುಕಾದೇವಿ ಅವರಿಗೆ ಕನ್ನಡ ಜಾಗೃತಿ ಸಮಿತಿ ಜಿಲ್ಲಾ ಘಟಕದ ಸದಸ್ಯರು ಮನವಿ ಸಲ್ಲಿಸಿದರು.

ಸರ್ಕಾರದ ಸುತ್ತೋಲೆ ಅನ್ವಯ ನ್ಯಾಯಾಲಯಗಳಲ್ಲಿ ಕನ್ನಡದಲ್ಲಿ ಅರ್ಜಿ ಸಲ್ಲಿಸುವುದು, ಕನ್ನಡದ ನಮೂನೆಗಳನ್ನು ಬಳಸುವುದು, ವಕೀಲರು ಕನ್ನಡದಲ್ಲೇ ವಾದ ಮಂಡಿಸುವುದು ಹಾಗೂ ನ್ಯಾಯಾಧೀಶರು ತೀರ್ಪುಗಳನ್ನು ಕನ್ನಡದಲ್ಲೇ ನೀಡಬೇಕು ಎಂದಿದೆ. ಬಹಳಷ್ಟು ನ್ಯಾಯಾಧೀಶರು ಕನ್ನಡದಲ್ಲಿಯೇ ತೀರ್ಪು ನೀಡುತ್ತಿದ್ದಾರೆ. ಆದರೆ, ಅಧೀನ ನ್ಯಾಯಾಲಯಗಳಲ್ಲಿ ಕನ್ನಡದ ಬಳಕೆ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳಿಸಬೇಕು ಎಂದು ಮನವಿ ಪತ್ರವನ್ನು ಜಾಗೃತಿ ಸಮಿತಿ ಸದಸ್ಯರು ಗುರುವಾರ ನ್ಯಾಯಾಧೀಶರಿಗೆ ಸಲ್ಲಿಸಿದರು.

ಕನ್ನಡ ಜಾಗೃತಿ ಸಮಿತಿ ಜಿಲ್ಲಾ ಘಟಕ ಸದಸ್ಯರಾದ ಸಂಕಮ್ಮ ಸಂಕಣ್ಣನವರ, ಡಾ.ಅಶೋಕ ಹಳ್ಳಿಯವರ, ಪ್ರಭು ನಿಂಬಕ್ಕನವರ, ವೀರೇಶ ಹಿತ್ತಲಮನಿ, ಕವಿತಾ ಮುದಕಣ್ಣನವರ ಉಪಸ್ಥಿತರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.