ADVERTISEMENT

ಮೃತ ಪೌರಕಾರ್ಮಿಕನ ಕುಟುಂಬಕ್ಕೆ ₹50 ಸಾವಿರ ಸಹಾಯಧನ

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2022, 16:04 IST
Last Updated 23 ಆಗಸ್ಟ್ 2022, 16:04 IST
ರಟ್ಟೀಹಳ್ಳಿ ಪಟ್ಟಣದಲ್ಲಿ ಇತ್ತೀಚೆಗೆ ಮೃತಪಟ್ಟಿದ್ದ ಪೌರಕಾರ್ಮಿಕ ನಾಗರಾಜ್ ಯಡಚಿ ಅವರ ಮನೆಗೆ ಕೃಷಿ ಸಚಿವ ಬಿ.ಸಿ ಪಾಟೀಲ ಅವರು ಮಂಗಳವಾರ ಭೇಟಿ ನೀಡಿ, ವೈಯಕ್ತಿಕವಾಗಿ ₹50 ಸಾವಿರ ನೆರವು ನೀಡಿದರು 
ರಟ್ಟೀಹಳ್ಳಿ ಪಟ್ಟಣದಲ್ಲಿ ಇತ್ತೀಚೆಗೆ ಮೃತಪಟ್ಟಿದ್ದ ಪೌರಕಾರ್ಮಿಕ ನಾಗರಾಜ್ ಯಡಚಿ ಅವರ ಮನೆಗೆ ಕೃಷಿ ಸಚಿವ ಬಿ.ಸಿ ಪಾಟೀಲ ಅವರು ಮಂಗಳವಾರ ಭೇಟಿ ನೀಡಿ, ವೈಯಕ್ತಿಕವಾಗಿ ₹50 ಸಾವಿರ ನೆರವು ನೀಡಿದರು    

ಹಾವೇರಿ: ರಟ್ಟೀಹಳ್ಳಿಪಟ್ಟಣದಲ್ಲಿ ಇತ್ತೀಚೆಗೆ ಮೃತಪಟ್ಟಿದ್ದ ರಟ್ಟೀಹಳ್ಳಿ ಪಟ್ಟಣ ಪಂಚಾಯಿತಿ ಪೌರಕಾರ್ಮಿಕ ನಾಗರಾಜ್ ಯಡಚಿ ಅವರ ಮನೆಗೆ ಕೃಷಿ ಸಚಿವ ಬಿ.ಸಿ ಪಾಟೀಲ ಅವರು ಮಂಗಳವಾರ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ವೈಯಕ್ತಿಕವಾಗಿ ₹50 ಸಾವಿರ ಸಹಾಯಧನವನ್ನು ಮೃತರ ಕುಟುಂಬಸ್ಥರಿಗೆ ನೀಡಿದರು.

ಜಿಲ್ಲಾಧಿಕಾರಿಗೆ ದೂರವಾಣಿ ಕರೆ ಮಾಡಿ ಮೃತ ಪೌರಕಾರ್ಮಿಕನ ಕುಟುಂಬಕ್ಕೆ ಸರ್ಕಾರದಿಂದ ₹5 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದರು. ಪೌರಕಾರ್ಮಿಕ ನಾಗರಾಜ್ ಯಡಚಿ ಕೆಲಸ ಮಾಡುವ ಸಂಧರ್ಭದಲ್ಲಿ ವಿಷಜಂತುವೊಂದು ಕೈಗೆ ಕಚ್ಚಿ ಮೃತಪಟ್ಟಿದ್ದರು.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಜಗದೀಶ ಕವಲಿ ಅವರ ಮನೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿ, ಅವರಿಗೆ ವೈಯಕ್ತಿಕವಾಗಿ ಬಿ.ಸಿ.ಪಾಟೀಲ ಅವರು ₹10 ಸಾವಿರ ನೆರವು ನೀಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.