ಸವಣೂರು: ಗ್ರಾಮೀಣ ಭಾಗದ ಜನರಿಗೆ ಸಮರ್ಪಕವಾಗಿ ಬ್ಯಾಂಕಿನ ಸೌಲಭ್ಯಗಳನ್ನು ತಲುಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಸಾಮಾಜಿಕ ಭದ್ರತಾ ಯೋಜನೆ ಹಾಗೂ ಅಟಲ್ ಪಿಂಚಣಿ ಯೋಜನೆಗಳನ್ನು ಜಾರಿಗೆ ತಂದು ಅನುಕೂಲ ಕಲ್ಪಿಸಿದೆ ಇದರ ಸದುಪಯೋಗವನ್ನು ಪ್ರತಿಯೊಬ್ಬ ಗ್ರಾಹಕರು ಪಡೆದುಕೊಳ್ಳಬೇಕು ಎಂದು ಕೆನರಾ ಬ್ಯಾಂಕ ವ್ಯವಸ್ಥಾಪಕ ಪ್ರಕಾಶ ಗೌರವ್ ತಿಳಿಸಿದರು.
ತಾಲ್ಲೂಕಿನ ಇಚ್ಚಂಗಿ ಗ್ರಾಮದ ಈಶ್ವರ ದೇವಸ್ಥಾನದ ಆವರಣದಲ್ಲಿ ಗ್ರಾ.ಪಂ, ಕೆನರಾ ಬ್ಯಾಂಕ್ ಇಚ್ಚಂಗಿ ಶಾಖೆ, ಅಮೂಲ್ಯ ಆರ್ಥಿಕ ಸಾಕ್ಷರತಾ ಕೇಂದ್ರ, ರೋಣದ ಮದರ ಸ್ವಯಂ ಸೇವಾ ಗ್ರಾಮೀಣ ಅಭಿವೃದ್ದಿ ಸಂಸ್ಥೆಯ ಸಿ.ಎಫ್.ಎಲ್, ಎನ್.ಆರ್.ಎಲ್.ಎಂ ಸಹಯೋಗದಲ್ಲಿ ಜರುಗಿದ ಜನ ಸುರಕ್ಷಾ ಅಭಿಯಾನ ಕಾರ್ಯಕ್ರಮ ಹಾಗೂ ಡಿಜಿಟಲ್ ಬ್ಯಾಂಕಿಂಗ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಬ್ಯಾಂಕಿಂಗ್ ವ್ಯವಸ್ಥೆಯಲ್ಲಿರುವ ಅಟಲ್ ಪಿಂಚಣಿ ಯೋಜನೆ ಇಳಿ ವಯಸ್ಸಿನಲ್ಲಿ ಜೀವನಾವಶ್ಯಕವಾಗಿರುವ ಯೋಜನೆಯಾಗಿದ್ದು ಅದರ ಸಧುಪಯೋಗವನ್ನು ಪಡೆದುಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಅಮೂಲ್ಯ ಆರ್ಥಿಕ ಸಾಕ್ಷರತಾ ಕೇಂದ್ರದ ಸಮಾಲೋಚಕ ಹರೀಶ ಹಿರಳ್ಳಿ ಮಾತನಾಡಿದರು.
ಪಿಡಿಓ ಬಸವರಾಜ ಉಜ್ಜಮ್ಮನವರ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ರೇಖಾ ಹಲಸೂರ, ಶಾರದಾ ಹಡಪದ, ಫಕ್ಕಿರೇಶ ಬೆಳವಿಗಿ, ದಾನೇಶ್ವರಿ ಗುತ್ತಲ, ಭಿಮಪ್ಪ ಲಮಾಣಿ, ಬ್ಯಾಂಕ್ ಹಾಗೂ ಸಂಜೀವಿನಿ ಒಕ್ಕೂಟದ ಸದಸ್ಯರು, ಸಿಬ್ಬಂದಿ ಪಾಲ್ಗೊಂಡಿದ್ದರು. ಕೊಟ್ರೇಶ ಕಡ್ಲಿಮಠ ನಿರ್ವಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.