ADVERTISEMENT

18 ತಂಬಾಕು ಅಂಗಡಿಗಳ ಮೇಲೆ ದಾಳಿ

​ಪ್ರಜಾವಾಣಿ ವಾರ್ತೆ
Published 13 ಜುಲೈ 2021, 14:04 IST
Last Updated 13 ಜುಲೈ 2021, 14:04 IST
ಹಾವೇರಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಿಬ್ಬಂದಿ ಮಂಗಳವಾರ ವಿವಿಧ ತಂಬಾಕು ಉತ್ಪನ್ನ ಮಾರಾಟ ಮಾಡುವ ಅಂಗಡಿಗಳ ಮೇಲೆ ದಾಳಿ ನಡೆಸಿ ದಂಡ ಹಾಕಿದರು
ಹಾವೇರಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಿಬ್ಬಂದಿ ಮಂಗಳವಾರ ವಿವಿಧ ತಂಬಾಕು ಉತ್ಪನ್ನ ಮಾರಾಟ ಮಾಡುವ ಅಂಗಡಿಗಳ ಮೇಲೆ ದಾಳಿ ನಡೆಸಿ ದಂಡ ಹಾಕಿದರು   

ಹಾವೇರಿ: ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ವಿವಿಧ ಅಧಿಕಾರಿಗಳನ್ನೊಳಗೊಂಡ ತಂಡ ಮಂಗಳವಾರ ರಾಣೆಬೆನ್ನೂರು ನಗರ ಹಾಗೂ ಹಂಸಭಾವಿ ಗ್ರಾಮದಲ್ಲಿ ವಿವಿಧ 18 ಅಂಗಡಿಗಳ ಮೇಲೆ ದಾಳಿ ನಡೆಸಿ ದಂಡ ವಸೂಲಿ ಮಾಡಲಾಗಿದೆ.

ತಂಬಾಕು ನಿಯಂತ್ರಣ ಕಾಯ್ದೆ-2003ರ ವಿರುದ್ಧವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ, ತಂಬಾಕು ಜಗಿದು ಉಗುಳುವವರ, ನೇರ-ಪರೋಕ್ಷವಾಗಿ ತಂಬಾಕು ಜಾಹೀರಾತು ಪ್ರದರ್ಶನ, ಶಾಲಾ-ಕಾಲೇಜು ಆವರಣದ 100 ಮೀಟರ್ ಅಂತರದೊಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಅಂಗಡಿ, ಬೇಕರಿ, ಹೋಟೆಲ್ ಮಾಲೀಕರಿಗೆ ನೋಟೀಸ್ ಜಾರಿ ಮಾಡಿ ತಂಬಾಕು ನಿಯಂತ್ರಣ ಕಾಯ್ದೆಯಡಿ ₹1850 ದಂಡ ವಸೂಲಿ ಮಾಡಲಾಗಿದೆ.

ದಾಳಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಸಲಹೆಗಾರರಾದ ಡಾ.ಸಂತೋಷ ದಡ್ಡಿ, ದಾದಾಪೀರ ಹುಲಿಕಟ್ಟಿ, ಆಹಾರ ಸುರಕ್ಷತಾ ಅಧಿಕಾರಿ ಎಸ್.ಸಿ.ಕೋರಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.