ADVERTISEMENT

ಟಿಕಾಯತ್‌ ಮೇಲಿನ ಹಲ್ಲೆ: ಖಂಡನೆ

ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ರೈತಸಂಘ

​ಪ್ರಜಾವಾಣಿ ವಾರ್ತೆ
Published 31 ಮೇ 2022, 13:44 IST
Last Updated 31 ಮೇ 2022, 13:44 IST
ರಾಷ್ಟ್ರೀಯ ಕಿಸಾನ್ ಮೋರ್ಚಾದ ನಾಯಕ ರಾಕೇಶ್ ಟಿಕಾಯತ್ ಅವರ ಮೇಲೆ ದುಷ್ಕರ್ಮಿಗಳು ನಡೆಸಿರುವ ಹಲ್ಲೆ ಖಂಡಿಸಿ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕ ಹಾಗೂ ಸಾಮೂಹಿಕ ನಾಯಕತ್ವದಲ್ಲಿ ಕಪ್ಪು ಪಟ್ಟಿ ಧರಿಸಿ ಮಂಗಳವಾರ ಹಾವೇರಿ ನಗರದಲ್ಲಿ ಪ್ರತಿಭಟನೆ ನಡೆಯಿತು 
ರಾಷ್ಟ್ರೀಯ ಕಿಸಾನ್ ಮೋರ್ಚಾದ ನಾಯಕ ರಾಕೇಶ್ ಟಿಕಾಯತ್ ಅವರ ಮೇಲೆ ದುಷ್ಕರ್ಮಿಗಳು ನಡೆಸಿರುವ ಹಲ್ಲೆ ಖಂಡಿಸಿ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕ ಹಾಗೂ ಸಾಮೂಹಿಕ ನಾಯಕತ್ವದಲ್ಲಿ ಕಪ್ಪು ಪಟ್ಟಿ ಧರಿಸಿ ಮಂಗಳವಾರ ಹಾವೇರಿ ನಗರದಲ್ಲಿ ಪ್ರತಿಭಟನೆ ನಡೆಯಿತು    

ಹಾವೇರಿ: ರಾಷ್ಟ್ರೀಯ ಕಿಸಾನ್ ಮೋರ್ಚಾದ ನಾಯಕ ರಾಕೇಶ್ ಟಿಕಾಯತ್ ಅವರ ಮೇಲೆ ದುಷ್ಕರ್ಮಿಗಳು ನಡೆಸಿರುವ ಹಲ್ಲೆ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕ ಹಾಗೂ ಸಾಮೂಹಿಕ ನಾಯಕತ್ವದಲ್ಲಿ ಕಪ್ಪು ಪಟ್ಟಿ ಧರಿಸಿ ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಮುರುಘರಾಜೇಂದ್ರ ಮಠದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಹೊಸಮನಿ ಸಿದ್ದಪ್ಪ ವೃತ್ತ, ಜೆ.ಪಿ.ವೃತ್ತದ ಮೂಲಕ ಸಾಗಿ ಮಹತ್ಮಾಗಾಂಧಿ ವೃತ್ತಕ್ಕೆ ಆಗಮಿಸಿತು. ನಂತರ ಪ್ರತಿಭಟನಾಕರರು ರೈತ ನಾಯಕರ ಮೇಲೆ ನಡೆಸಿದ ಹಲ್ಲೆ ಖಂಡಿಸಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಪ್ರತಿಭಟನಾಕಾರರು ಮಾತನಾಡಿ, ಬೆಂಗಳೂರಿನ ಗಾಂಧಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸುವಾಗ ದುಷ್ಕರ್ಮಿಗಳು ಬಂದು ನಮ್ಮ ರಾಷ್ಟ್ರೀಯ ರೈತ ನಾಯಕ ರಾಕೇಶ ಟಿಕಾಯತ್ ಅವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಮಸಿ ಎರಚಿರುವುದು ಖಂಡನೀಯ. ದೆಹಲಿ ಗಡಿಯಲ್ಲಿ ಚಳಿ, ಮಳೆ, ಗಾಳಿ ಹಾಗೂ ಮಹಾಮಾರಿ ಕೊರೊನಾ ರೋಗವನ್ನು ಲೆಕ್ಕಿಸದೆ ಅಹೋರಾತ್ರಿ ಪ್ರತಿಭಟನೆ ನಡೆಸಿದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್ ಅವರಿಗೂ ನಮಗೂ ಯಾವುದೇ ಸಂಬಂಧವಿಲ್ಲ. ನಮ್ಮ ಜೊತೆ ಸಾವಿರಾರು ರೈತರು ಮತ್ತು ರೈತ ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಿರುತ್ತಾರೆ ಎಂದು ರಾಕೇಶ್ ಅವರು ಸ್ಪಷ್ಟಣೆ ನೀಡುವಾಗ ಏಕಾಏಕಿ ದುಷ್ಕರ್ಮಿಗಳು ಬಂದು ಹಲ್ಲೆ ನಡೆಸಿ, ಮಸಿ ಎರಚಿರುವುದು ರಾಜ್ಯ ಸರ್ಕಾರದ ಭದ್ರತಾ ವೈಫಲ್ಯವಾಗಿದೆ ಎಂದು ದೂರಿದರು.

ADVERTISEMENT

ರೈತ ನಾಯಕರ ಮೇಲೆ ನಡೆಸಿದ ಹಲ್ಲೆ ಪ್ರಕರಣ ರಾಜಕೀಯ ಪ್ರೇರಿತವಾಗಿದೆ. ನಮ್ಮನ್ನ ಆಳುತ್ತಿರುವ ರಾಜಕೀಯ ಪಕ್ಷಗಳು ಮುಂಬರುವ ಚುನಾವಣೆ ದೃಷ್ಟಿಯಿಂದ ರೈತರನ್ನು ಅವಮಾನಿಸಲು ಮಾಡಿದ ಪಿತೂರಿ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ರಾಷ್ಟ್ರೀಯ ನಾಯಕರ ಮೇಲೆ ಮಾಡುತ್ತಿರುವ ಆಪಾದನೆಯನ್ನು ರೈತ ಸಂಘ ಖಂಡಿಸುತ್ತದೆ. ರಾಷ್ಟ್ರೀಯ ನಾಯಕರ ಮೇಲೆ ನಡೆದ ಹಲ್ಲೆ ಮತ್ತು ಅವಮಾನವನ್ನು ಸಹಿಸಲು ಸಾಧ್ಯವಿಲ್ಲ. ಕೂಡಲೇ ಸರ್ಕಾರದ ಹಲ್ಲೆ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ದುಷ್ಕರ್ಮಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ನಮ್ಮ ರೈತ ಕುಲಕ್ಕೆ ನ್ಯಾಯ ದೊರಕಿಸಿಕೊಡಬೇಕು. ಇಲ್ಲವಾದಲ್ಲಿ ರಾಜ್ಯದಾದ್ಯಂತ ಉಗ್ರ ಹೋರಾಟ ನಡಸಲಾಗುವುದು ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ರಾಮಣ್ಣ ಕೆಂಚಳ್ಳೇರ, ಗಂಗಣ್ಣ ಎಲಿ, ಕೆ.ಆರ್.ಗಡಿಗೋಳ, ಮಹಮ್ಮದ್ ಗೌಸ್ ಪಾಟೀಲ, ಮಲ್ಲೇಶಪ್ಪ ಡಂಬಳ, ಗಂಗನಗೌಡ ಎಸ್, ಪ್ರಭುಗೌಡ ಪ್ಯಾಟಿ, ಕೆ.ವಿ.ದೊಡ್ಡಗೌಡ್ರ, ಮಂಜನಗೌಡ ಸಣ್ಣಗೌಡ್ರ, ಬಸಪ್ಪ ಬನ್ನಿಹಳ್ಳಿ, ಮಂಜಪ್ಪ ತೋಟದ,ಸೋಮಪ್ಪ ಕಳ್ಳೇರ, ಕಲ್ಲಪ್ಪ ಕಬ್ಬೂರ, ಹನುಮಂತಪ್ಪ ಜೋಗೇರ, ಅಡಿವೆಪ್ಪ ಆಲದಕಟ್ಟಿ, ಮಾಲತೇಶ ಪರಪ್ಪನವರ, ಶಿವಯೋಗಿ ಹೊಸಗೌಡ್ರ, ಸುರೇಶ ಹೊನ್ನಪ್ಪನವರ, ಶಿವಬಸಪ್ಪ ಗೋವಿ, ವೀರೇಶ ಜೋಗೇರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.