ADVERTISEMENT

ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿ.ಸಿ. ಪಾಟೀಲ ಮಗಳು

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2025, 16:56 IST
Last Updated 8 ಫೆಬ್ರುವರಿ 2025, 16:56 IST
<div class="paragraphs"><p>ಸೃಷ್ಟಿ ಪಾಟೀಲ </p></div>

ಸೃಷ್ಟಿ ಪಾಟೀಲ

   

ಹಾವೇರಿ: ಜಿಲ್ಲೆಯ ಹಿರೇಕೆರೂರು ಕ್ಷೇತ್ರದ ಮಾಜಿ ಶಾಸಕರಾದ ಬಿ.ಸಿ. ಪಾಟೀಲ ಅವರ ಮಗಳು ಸೃಷ್ಟಿ ಪಾಟೀಲ ಅವರು ಬಿಜೆಪಿಯ ಹಾವೇರಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಅರುಣ ಪೂಜಾರ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಸೃಷ್ಟಿ ಪಾಟೀಲ, ‘ಪಕ್ಷದ ಸಾಮಾನ್ಯ ಕಾರ್ಯಕರ್ತೆಯಾಗಿ ಮುಂದುವರಿಯುತ್ತೇನೆ’ ಎಂದು ಹೇಳಿದ್ದಾರೆ.

ADVERTISEMENT

‘ಹಾವೇರಿ ಜಿಲ್ಲಾ ಮಹಿಳಾ ಮೋರ್ಚಾ ಘಟಕದ ಅಧ್ಯಕ್ಷರಾಗಿ ಮಾಡಿದ್ದು ಸಂತೋಷದ ವಿಷಯ. ಒಂದು ವರ್ಷದಿಂದ ಸಾಧ್ಯವಾದಷ್ಟು ಕೆಲಸ ಮಾಡಿಕೊಂಡು ಬಂದಿರುತ್ತೇನೆ. ಆದರೆ, ನಿರೀಕ್ಷಿಸಿದಷ್ಟು ಕೆಲಸ ನನ್ನಿಂದ ಆಗಿಲ್ಲವೆಂಬ ಭಾವನೆ ಕಾಡುತ್ತಿದೆ. ಆದ್ದರಿಂದ ಆ ಸ್ಥಾನಕ್ಕೆ ಅನ್ಯಾಯವಾಗಬಾರದೆಂಬ ಕಾರಣಕ್ಕೆ ನನ್ನ ಸ್ವ–ಇಚ್ಛೆಯಿಂದ ರಾಜೀನಾಮೆ ನೀಡುತ್ತಿದ್ದೇನೆ’ ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.