ಹಂಸಭಾವಿ: ತಲೆಯ ಮೇಲೆ ತೆಂಗಿನಕಾಯಿ ಬಿದ್ದು 11 ತಿಂಗಳ ಮಗು ಮೃತಪಟ್ಟ ಘಟನೆ ಗ್ರಾಮದಲ್ಲಿ ಸೋಮವಾರ ನಡೆದಿದೆ.
ತನ್ವಿತ್ ಮಲ್ಲಿಕಾರ್ಜುನ ವಾಲ್ಮೀಕಿ ಮೃತ ಮಗು. ಸೋಮವಾರ ಬೆಳೆಗ್ಗೆ ಮಗು ಆಟವಾಡುತ್ತಾ ಮನೆಯಿಂದ ಹೊರಗೆ ಬಂದಾಗ ಮರದಲ್ಲಿದ್ದ ತಲೆಯ ಮೇಲೆ ತೆಂಗಿನಕಾಯಿ ಬಿದ್ದಿದೆ. ಕೂಡಲೇ ಮಗುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರೂ, ಚಿಕಿತ್ಸೆ ಫಲಿಸದೇ ಮಗು ಸಂಜೆ ವೇಳೆಗೆ ಮೃತಪಟ್ಟಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.