ADVERTISEMENT

ಬ್ಯಾಡಗಿ ಮೆಣಸಿನಕಾಯಿ ಆವಕದಲ್ಲಿ ಇಳಿಕೆ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2023, 13:58 IST
Last Updated 7 ಆಗಸ್ಟ್ 2023, 13:58 IST
   

ಬ್ಯಾಡಗಿ: ಇಲ್ಲಿಯ ಕೃಷಿ ಉತ್ಪನ್ನ ಮಾರುಕಟ್ಟೆಗೆ ಸೋಮವಾರ 1,615 ಕ್ವಿಂಟಲ್ ಮೆಣಸಿನಕಾಯಿ ಮಾರಾಟಕ್ಕೆ ತರಲಾಗಿದ್ದು, ಆವಕದಲ್ಲಿ ತುಸು ಇಳಿಕೆಯಾಗಿದೆ.

ಕಳೆದ ಶುಕ್ರವಾರ ಮಾರುಕಟ್ಟೆಗೆ 2,667 ಕ್ವಿಂಟಲ್ ಮೆಣಸಿನಕಾಯಿ ಆವಕವಾಗಿತ್ತು. ಸೋಮಾವರ ತೇವಾಂಶ ಹೆಚ್ಚಿರುವ ಹಾಗೂ ಕನಿಷ್ಢ ಗುಣಮಟ್ಟ ಹೊಂದಿರದ 466 ಲಾಟ್‌ಗಳಿಗೆ ಟೆಂಡರ್ ನಮೂದಿಸಿಲ್ಲ.

2 ಚೀಲ ಬ್ಯಾಡಗಿ ಡಬ್ಬಿ ಮೆಣಸಿನಕಾಯಿ ಕ್ವಿಂಟಲ್‌ಗೆ ₹56,199 ರಂತೆ, 2 ಚೀಲ ಕಡ್ಡಿ ಮೆಣಸಿನಕಾಯಿ ₹50,000ರಂತೆ ಗರಿಷ್ಟ ಬೆಲೆಯಲ್ಲಿ ಮಾರಾಟವಾಗಿದ್ದು, ಕಳೆದ ಶುಕ್ರವಾರಕ್ಕಿಂತ ಡಬ್ಬಿ ಮೆಣಸಿನಕಾಯಿ ₹8 ಸಾವಿರ, ಕಡ್ಡಿ ಮೆಣಸಿನಕಾಯಿ ₹3 ಸಾವಿರ ಇಳಿಕೆ ಕಂಡಿದೆ.

ADVERTISEMENT

ಗುಂಟೂರ ತಳಿ ₹18,609 ರಂತೆ ಗರಿಷ್ಠ ಬೆಲೆಯಲ್ಲಿ ಮಾರಾಟವಾಗಿದ್ದು, ಸ್ಥಿರತೆ  ಕಾಯ್ದುಕೊಂಡಿದೆ. ಸರಾಸರಿ ಬೆಲೆಯಲ್ಲಿ ಬ್ಯಾಡಗಿ ಡಬ್ಬಿ ಮೆಣಸಿನಕಾಯಿ ಕ್ವಿಂಟಲ್‌ಗೆ ₹40,069, ಕಡ್ಡಿ ಮೆಣಸಿನಕಾಯಿ ₹31,079 ಹಾಗೂ ಗುಂಟೂರು ತಳಿ ₹16,219ರಂತೆ ಮಾರಾಟವಾಗಿದ್ದು, ಬೆಲೆಯಲ್ಲಿ ತುಸು ಇಳಿಕೆ ಕಂಡಿದೆ.

ಇಂದಿನ ಟೆಂಡರ್‌ ಪ್ರಕ್ರಿಯೆಯಲ್ಲಿ ಒಟ್ಟು130 ಖರೀದಿ ವರ್ತಕರು ಪಾಲ್ಗೊಂಡಿದ್ದರು ಎಂದು ಎಪಿಎಂಸಿ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.