ADVERTISEMENT

‘ಬಂಜಾರ ಸಮಾಜಕ್ಕೆ ಸಚಿವ ಸ್ಥಾನ ಬೇಕು’: ರುದ್ರಪ್ಪ ಲಮಾಣಿ

​ಪ್ರಜಾವಾಣಿ ವಾರ್ತೆ
Published 19 ಮೇ 2025, 14:30 IST
Last Updated 19 ಮೇ 2025, 14:30 IST
ರುದ್ರಪ್ಪ ಲಮಾಣಿ
ರುದ್ರಪ್ಪ ಲಮಾಣಿ   

ಹಾವೇರಿ: ‘ನಮ್ಮ ಬಂಜಾರ (ಲಂಬಾಣಿ) ಸಮಾಜದ ಯಾರೊಬ್ಬರೂ ಸಚಿವರಾಗಿಲ್ಲ. ಸಮಾಜದವರಿಗೆ ಸಚಿವ ಸ್ಥಾನ ನೀಡಲು ಕೋರಿದ್ದೇನೆ. ಅಂತಿಮ ನಿರ್ಣಯ ಪಕ್ಷದ ಹೈಕಮಾಂಡ್‌ಗೆ ಬಿಟ್ಟಿರುವೆ’ ಎಂದು ಶಾಸಕ ರುದ್ರಪ್ಪ ಲಮಾಣಿ ಹೇಳಿದರು.

‘ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದಾಗಲೂ ನಾನು ಇದೇ ಬೇಡಿಕೆ ಇರಿಸಿದ್ದೆ. ಸುರ್ಜೇವಾಲಾ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ಮನವೊಲಿಸಿ, ವಿಧಾನಸಭೆಯ ಉಪಸಭಾಪತಿ ಸ್ಥಾನ ನೀಡಿದರು’ ಎಂದು ಅವರು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.

‘ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರವು ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಮಾಡುತ್ತಿದೆ. ಮುಂದಿನ ಸಚಿವ ಸಂಪುಟದ ವಿಸ್ತರಣೆ ಸಂದರ್ಭದಲ್ಲಿ ನನ್ನ ಬೇಡಿಕೆಗೆ ಮನ್ನಣೆ ನೀಡಬೇಕು’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.