ADVERTISEMENT

ಹಾವೇರಿ: ಸಿಬ್ಬಂದಿಗೆ ಕೋವಿಡ್‌‌-19 ದೃಢ, ಬ್ಯಾಂಕ್‌ ಬಂದ್‌

​ಪ್ರಜಾವಾಣಿ ವಾರ್ತೆ
Published 15 ಜುಲೈ 2020, 18:00 IST
Last Updated 15 ಜುಲೈ 2020, 18:00 IST
ಹಾವೇರಿ ನಗರದ ಹಳೇ ಪಿ.ಬಿ.ರಸ್ತೆಯಲ್ಲಿರುವ ಕೆನರಾ ಬ್ಯಾಂಕ್‌ ಸಿಬ್ಬಂದಿಗೆ ಕೋವಿಡ್‌ ಪಾಸಿಟಿವ್‌ ಪತ್ತೆಯಾಗಿದ್ದು, ಬ್ಯಾಂಕ್‌ ಸೇವೆ ಸ್ಥಗಿತಗೊಳಿಸಲಾಗಿದೆ ಎಂದು ಪ್ರಕಟಣೆ ಅಂಟಿಸಿರುವುದು 
ಹಾವೇರಿ ನಗರದ ಹಳೇ ಪಿ.ಬಿ.ರಸ್ತೆಯಲ್ಲಿರುವ ಕೆನರಾ ಬ್ಯಾಂಕ್‌ ಸಿಬ್ಬಂದಿಗೆ ಕೋವಿಡ್‌ ಪಾಸಿಟಿವ್‌ ಪತ್ತೆಯಾಗಿದ್ದು, ಬ್ಯಾಂಕ್‌ ಸೇವೆ ಸ್ಥಗಿತಗೊಳಿಸಲಾಗಿದೆ ಎಂದು ಪ್ರಕಟಣೆ ಅಂಟಿಸಿರುವುದು    

ಹಾವೇರಿ: ನಗರದ ಹಳೇ ಪಿ.ಬಿ.ರಸ್ತೆಯಲ್ಲಿರುವ ಕೆನರಾ ಬ್ಯಾಂಕ್‌ ಸಿಬ್ಬಂದಿಯೊಬ್ಬರಿಗೆ ಕೊರೊನಾ‌ ಪಾಸಿಟಿವ್‌ ಬಂದ ಹಿನ್ನೆಲೆಯಲ್ಲಿ, ಬುಧವಾರದಿಂದ ಮುಂದಿನ ಆದೇಶದವರೆಗೆ ಬ್ಯಾಂಕ್‌ ಸೇವೆ ಸ್ಥಗಿತಗೊಳಿಸಲಾಗಿದೆ ಎಂದು ಪ್ರಕಟಣೆಯನ್ನು ಬಾಗಿಲ ಮೇಲೆ ಅಂಟಿಸಲಾಗಿದೆ.

ಹಲವಾರು ಗ್ರಾಹಕರು ಬ್ಯಾಂಕ್‌ ತೆರೆಯುವ ವೇಳೆಗೆ ಬಂದಿದ್ದರು. ಆದರೆ ಬಾಗಿಲು ತೆರೆಯದ ಕಾರಣ ಕೆಲಕಾಲ ಗೊಂದಲಕ್ಕೆ ಒಳಗಾದರು. ನಂತರ ಅಲ್ಲಿನ ಸಿಬ್ಬಂದಿಯೊಬ್ಬರು ಸಿಬ್ಬಂದಿಗೆ ಕೋವಿಡ್‌ ದೃಢಗೊಂಡ ಕಾರಣ ಬ್ಯಾಂಕ್‌ ವಹಿವಾಟು ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದ ಮೇರೆಗೆ ಗ್ರಾಹಕರು ಹಿಂದಿರುಗಿದರು.

ಒಂದು ವಾರದಿಂದ ಈ ಬ್ಯಾಂಕಿಗೆ ಬಂದಿದ್ದ ಗ್ರಾಹಕರಲ್ಲಿ ಕೊರೊನಾ ಸೋಂಕಿನ ಭೀತಿ ಹೆಚ್ಚಾಗಿದೆ. ಆದರೆ, ಜಿಲ್ಲಾಡಳಿತ ಈ ಬಗ್ಗೆ ಅಧಿಕೃತ ಮಾಹಿತಿ ನೀಡಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.