ADVERTISEMENT

ಬಸವ ಪುತ್ಥಳಿಗೆ ಮಾಲಾರ್ಪಣೆ: ಹಾವೇರಿಯಲ್ಲಿ ಸರಳವಾಗಿ ಬಸವ ಜಯಂತಿ ಆಚರಣೆ 

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2020, 15:09 IST
Last Updated 26 ಏಪ್ರಿಲ್ 2020, 15:09 IST
ಹಾವೇರಿಯ ಬಸವೇಶ್ವರ ವೃತ್ತದ ಬಸವಣ್ಣನವರ ಪುತ್ಥಳಿಗೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದರಾಜ ಕಲಕೋಟಿ ಪುಷ್ಪಾರ್ಚನೆ ಮಾಡಿದರು.
ಹಾವೇರಿಯ ಬಸವೇಶ್ವರ ವೃತ್ತದ ಬಸವಣ್ಣನವರ ಪುತ್ಥಳಿಗೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದರಾಜ ಕಲಕೋಟಿ ಪುಷ್ಪಾರ್ಚನೆ ಮಾಡಿದರು.   

ಹಾವೇರಿ: ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ವಿಶ್ವಗುರು ಬಸವಣ್ಣನವರ 887ನೇ ಜಯಂತಿಯನ್ನು ಪುಷ್ಪಾರ್ಚನೆ ಮಾಡುವ ಮೂಲಕ ಸರಳವಾಗಿ ಆಚರಿಸಲಾಯಿತು.

ಬಸವೇಶ್ವರ ವೃತದಲ್ಲಿನ ಬಸವಣ್ಣನವರ ಪುತ್ಥಳಿಗೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದರಾಜ ಕಲಕೋಟಿ ಅವರು ಮಾಲಾರ್ಪಣೆ ಮಾಡಿದರು.ಸಿದ್ದರಾಜ ಕಲಕೋಟಿ ಅವರ ಮನೆಯಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಜಯಂತಿ ಆಚರಿಸಲಾಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರದೀಪ ಮುಳ್ಳೂರ, ಮುಖಂಡರಾದ ಪ್ರಭು ಹಿಟ್ನಳ್ಳಿ, ರಮೇಶ ಪಾಲನಕರ, ಸುನೀಲ ರಾಯ್ಕರ, ಪ್ರದೀಪ ಗೌಡರ ಇದ್ದರು.

ಜಿಲ್ಲಾಡಳಿತದಿಂದ ಬಸವ ಜಯಂತಿ:ಲಾಕ್‌ಡೌನ್‌ ಜಾರಿಯಲ್ಲಿರುವುದರಿಂದ ಜಿಲ್ಲಾಡಳಿತದಿಂದ ಭಾನುವಾರ ಜಗಜ್ಯೋತಿ ಬಸವೇಶ್ವರರ ಜಯಂತಿಯನ್ನು ಜಿಲ್ಲಾಧಿಕಾರಿ ಕಚೇರಿಯ ಸಭಾ ಭವನದಲ್ಲಿ ಸರಳವಾಗಿ ಆಚರಿಸಲಾಯಿತು.ಬಸವೇಶ್ವರರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಹಾಗೂ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಸವನಗೌಡ ದೇಸಾಯಿ ಮಾಲಾರ್ಪಣೆ ಮಾಡಿ ನಮಿಸಿದರು.

ADVERTISEMENT

ಜಿಲ್ಲಾ ಪಂಚಾಯಿತಿ ಸಿಇಒ ರಮೇಶ್ ದೇಸಾಯಿ, ಹೆಚ್ಚುವರಿ ಜಿಲ್ಲಾಧಿಕಾರಿ ಯೋಗೇಶ್ವರ, ಹೆಚ್ಚುವರಿ ಪೋಲೀಸ್ ವರಿಷ್ಠಾಧಿಕಾರಿ ಮಲ್ಲಿಕಾಜು೯ನ ಬಾಲದಂಡಿ, ಸಮಾಜ ಕಲ್ಯಾಣ ಇಲಾಖೆ ಉಪನಿದೇ೯ಶಕಿ ಚೈತ್ರಾ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿದೇ೯ಶಕಿ ಶಶಿಕಲಾ ಹುಡೇದ ಸೇರಿದಂತೆ ಇತರ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.