ಹಾನಗಲ್: ಹಾವೇರಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರು ಮಾರ್ಚ್ 26ರಂದು ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ಕೈಗೊಳ್ಳಲಿದ್ದಾರೆ.
ಬೆಳಿಗ್ಗೆ 10 ಗಂಟೆಗೆ ತಾಲ್ಲೂಕಿನ ಮಾಸನಕಟ್ಟಿ ಗ್ರಾಮದಲ್ಲಿ ರೋಡ್ ಶೋ ನಡೆಸಲಿದ್ದಾರೆ. 11.30ಕ್ಕೆ ಬೆಳಗಾಲಪೇಟೆ ಗ್ರಾಮದ ವೀರಭದ್ರೇಶ್ವರ ಸಭಾ ಭವನ ಹಾಗೂ 12.30ಕ್ಕೆ ನರೇಗಲ್ ಗ್ರಾಮದ ಶಿವಾನಂದ ಕೋತನವರ ಮನೆ ಆವರಣದಲ್ಲಿ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ ಎಂದು ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಮಹೇಶ ಕಮಡೊಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.