ADVERTISEMENT

ಕನ್ನಡ ಭಾಷೆ ರಕ್ಷಣೆಗೆ ಕನ್ನಡಿಗರು ಶ್ರಮಿಸಿ: ಮಾಜಿ ಸಚಿವ ಬಿ.ಸಿ. ಪಾಟೀಲ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2026, 5:29 IST
Last Updated 2 ಫೆಬ್ರುವರಿ 2026, 5:29 IST
ರಟ್ಟೀಹಳ್ಳಿ ತಾಲ್ಲೂಕು ಹಳ್ಳೂರು ಗ್ರಾಮದಲ್ಲಿ ಶನಿವಾರ ನಡೆದ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಜಿ ಸಚಿವ ಬಿ.ಸಿ. ಪಾಟೀಲ ಅವರು ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದರು 
ರಟ್ಟೀಹಳ್ಳಿ ತಾಲ್ಲೂಕು ಹಳ್ಳೂರು ಗ್ರಾಮದಲ್ಲಿ ಶನಿವಾರ ನಡೆದ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಜಿ ಸಚಿವ ಬಿ.ಸಿ. ಪಾಟೀಲ ಅವರು ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದರು    

ರಟ್ಟೀಹಳ್ಳಿ: ‘ಕನ್ನಡ ಭಾಷೆ, ನೆಲ, ಜಲ, ಉಳಿವಿಗಾಗಿ ಕನ್ನಡಿಗರು ಒಂದಾಗಬೇಕು. ಭಾಷೆ ರಕ್ಷಣೆಗೆ ಹೋರಾಟ ನಡೆಸುವ ಮನಸ್ಸು ಹೊಂದಬೇಕು’ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.

ತಾಲ್ಲೂಕಿನ ಹಳ್ಳೂರು ಗ್ರಾಮದಲ್ಲಿ ಶನಿವಾರ ನಡೆದ ತಾಲ್ಲೂಕು 3ನೇ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

‘ಕನ್ನಡ ಸಾಹಿತ್ಯ ಪರಿಷತ್ ಘಟಕವು ಕನ್ನಡ ಭಾಷೆ ಅಭಿವೃದ್ಧಿಗೆ ಪ್ರತಿ ಹಂತದಲ್ಲಿ ಜಾಗೃತಿ ಮೂಡಿಸುತ್ತಿರುವ ಕಾರ್ಯ ಶ್ಲಾಘನೀಯ’ ಎಂದರು.

ADVERTISEMENT

ಈ ವೇಳೆ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದರು. ತಿಪ್ಪಾಯಿಕೊಪ್ಪ ಮಠದ ಮಹಾಂತ ಸ್ವಾಮೀಜಿ, ನಾಗವಂದ ಗ್ರಾಮದ ಹೊರಗಿನ ಮಠದ ಶಿವಯೋಗಿ ಶಿವಾನಂದ ಸ್ವಾಮಿಜಿ ಸಾನ್ನಿಧ್ಯ ವಹಿಸಿದ್ದರು. ವಿವಿಧ ಸಾಧಕರಿಗೆ ಸನ್ಮಾನಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು. 

ಸಮ್ಮೇಳನದ ಅಧ್ಯಕ್ಷ ಜಯಪ್ಪ ಹೊನ್ನಾಳಿ, ಪ್ರಾಚಾರ್ಯ ಎಸ್.ಪಿ. ಗೌಡರ, ದೇವಸ್ಥಾನ ಧರ್ಮದರ್ಶಿ ಬಿ.ಎಂ. ಮೆಣಸಿನಕಾಯಿ, ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಎಂ.ಸಿ. ತುಮ್ಮಿನಕಟ್ಟಿ, ಸೇರಿದಂತೆ ಇತರರು ಇದ್ದರು. ರಾಜು ಹರವಿಶೆಟ್ಟರ ಸ್ವಾಗತಿಸಿದರು. ಹೇಮಣ್ಣ ನಿಂಬೆಗೊಂದಿ ನಿರೂಪಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.