ADVERTISEMENT

ಸಂಚಾರ ಜಾಗೃತಿಗೆ ಬೈಕ್‌ ರ‍್ಯಾಲಿ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2023, 16:14 IST
Last Updated 25 ಫೆಬ್ರುವರಿ 2023, 16:14 IST
ಹಾವೇರಿ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪೊಲೀಸ್ ಇಲಾಖೆಯಿಂದ ಆಯೋಜಿಸಿದ್ದ ಬೈಕ್ ರ‍್ಯಾಲಿಗೆ ಚಾಲನೆ ನೀಡಲಾಯಿತು. ಎಸ್ಪಿ ಶಿವಕುಮಾರ ಗುಣಾರೆ, ಹೆಚ್ಚುವರಿ ಎಸ್ಪಿ ಸಿ.ಗೋಪಾಲ್‌, ಆರ್‌ಟಿಒ ವಸೀಮಬಾಬಾ ಮುದ್ದೇಬಿಹಾಳ ಹಾಗೂ ಪೊಲೀಸ್‌ ಅಧಿಕಾರಿಗಳು ಇದ್ದಾರೆ 
ಹಾವೇರಿ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪೊಲೀಸ್ ಇಲಾಖೆಯಿಂದ ಆಯೋಜಿಸಿದ್ದ ಬೈಕ್ ರ‍್ಯಾಲಿಗೆ ಚಾಲನೆ ನೀಡಲಾಯಿತು. ಎಸ್ಪಿ ಶಿವಕುಮಾರ ಗುಣಾರೆ, ಹೆಚ್ಚುವರಿ ಎಸ್ಪಿ ಸಿ.ಗೋಪಾಲ್‌, ಆರ್‌ಟಿಒ ವಸೀಮಬಾಬಾ ಮುದ್ದೇಬಿಹಾಳ ಹಾಗೂ ಪೊಲೀಸ್‌ ಅಧಿಕಾರಿಗಳು ಇದ್ದಾರೆ    

ಹಾವೇರಿ: ಜಿಲ್ಲಾ ಪೊಲೀಸ್ ಇಲಾಖೆಯಿಂದ ಸಂಚಾರ ಜಾಗೃತಿ ಅಭಿಯಾನದ ಅಂಗವಾಗಿ ಶನಿವಾರ ಆಯೋಜಿಸಿದ್ದ ಬೈಕ್ ರ‍್ಯಾಲಿಗೆ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಶನಿವಾರ ಚಾಲನೆ ನೀಡಲಾಯಿತು.

ಶಾಸಕ ನೆಹರು ಓಲೇಕಾರ ಮಾತನಾಡಿ, ಕಳೆದ ಒಂದು ವಾರದಿಂದ ರಸ್ತೆ ಸುರಕ್ಷಾ ಜಾಗೃತಿ ಅಭಿಯಾನವನ್ನು ಪೊಲೀಸ್ ಇಲಾಖೆಯಿಂದ ಕೈಗೊಂಡು ಅತ್ಯುತ್ತಮವಾಗಿ ನಿರ್ವಹಣೆ ಮಾಡಲಾಗಿದೆ. ಈ ಅಭಿಯಾನದ ಮೂಲಕ ಸಾರ್ವಜನಿಕರಲ್ಲಿ ರಸ್ತೆ ಸಂಚಾರದ ನಿಯಮಗಳ ಬಗ್ಗೆ ತಿಳಿವಳಿಕೆ ಮೂಡಿಸುವ ಕೆಲಸ ಮಾಡಲಾಗಿದೆ. ಪ್ರತಿಯೊಬ್ಬ ವಾಹನ ಸವಾರರು ರಸ್ತೆ ಸಂಚಾರದ ನಿಯಮಗಳನ್ನು ಪಾಲಿಸುವುದನ್ನು ರೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಸಂಚಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದ್ದಲ್ಲಿ ಯಾವುದೇ ಅನಾಹುತಗಳು ಸಂಭವಿಸುವುದಿಲ್ಲ. ನಾವು ಸುರಕ್ಷವಾಗಿರುವ ಜೊತೆಗೆ ನಮ್ಮ ಕುಟುಂಬವು ಸುರಕ್ಷಿತವಾಗಿ ಇರುತ್ತದೆ. ಹೀಗಾಗಿ ವಾಹನ ಸವಾರರು ಸಂಚಾರದ ನಿಯಮಗಳ ಬಗ್ಗೆ ನಿರ್ಲಕ್ಷ್ಯ ತೋರದೇ ಕಟ್ಟುನಿಟ್ಟಾಗಿ ನಿಯಮಗಳನ್ನು ಪಾಲಿಸಬೇಕು ಎಂದು ಹೇಳಿದರು.

ADVERTISEMENT

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶಿವಕುಮಾರ ಗುಣಾರೆ, ಹೆಚ್ಚುವರಿ ಎಸ್ಪಿ ಸಿ.ಗೋಪಾಲ್‌, ಆರ್‌ಟಿಒ ವಸೀಂಬಾಬಾ ಮುದ್ದೇಬಿಹಾಳ ಸೇರಿದಂತೆ ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.