ADVERTISEMENT

ಮನೆ– ಮನೆ ಸಂಪರ್ಕ ಅಭಿಯಾನಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 6 ಜೂನ್ 2020, 16:10 IST
Last Updated 6 ಜೂನ್ 2020, 16:10 IST
ಹಾವೇರಿ ನಗರದಲ್ಲಿ ಶನಿವಾರ ಬಿಜೆಪಿ ಮುಖಂಡರು ಮನೆ–ಮನೆ ಸಂಪರ್ಕದ ಅಭಿಯಾನದ ಅಂಗವಾಗಿ ಕೇಂದ್ರ ಸರ್ಕಾರದ ಸಾಧನೆಗಳ ಕರಪತ್ರಗಳನ್ನು ಜನರಿಗೆ ವಿತರಿಸಿದರು. ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದರಾಜ ಕಲಕೋಟಿ ಇದ್ದಾರೆ
ಹಾವೇರಿ ನಗರದಲ್ಲಿ ಶನಿವಾರ ಬಿಜೆಪಿ ಮುಖಂಡರು ಮನೆ–ಮನೆ ಸಂಪರ್ಕದ ಅಭಿಯಾನದ ಅಂಗವಾಗಿ ಕೇಂದ್ರ ಸರ್ಕಾರದ ಸಾಧನೆಗಳ ಕರಪತ್ರಗಳನ್ನು ಜನರಿಗೆ ವಿತರಿಸಿದರು. ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದರಾಜ ಕಲಕೋಟಿ ಇದ್ದಾರೆ   

ಹಾವೇರಿ: ಪ್ರಧಾನಿ ನರೇಂದ್ರ ಮೋದಿಯವರ 2ನೇ ಅವಧಿಯ ಮೊದಲ ವರ್ಷದ ಸಾಧನೆ, ಕೊರೊನಾ ಸೋಂಕು ತಡೆಗಟ್ಟಲು ಕೈಗೊಂಡ ಕ್ರಮಗಳ ಬಗ್ಗೆ ಹಾಗೂ ‘ಆತ್ಮ ನಿರ್ಭರ ಭಾರತ’ದ (₹20 ಲಕ್ಷ ಕೋಟಿ) ಪರಿಕಲ್ಪನೆಯನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಕರಪತ್ರಗಳ ಮೂಲಕ ಮನೆ–ಮನೆ ಸಂಪರ್ಕದ ಅಭಿಯಾನಕ್ಕೆ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದರಾಜ ಕಲಕೋಟಿಅವರು ಹಾವೇರಿ ನಗರದ 10ನೇ ವಾರ್ಡ್‌ನಲ್ಲಿ ಚಾಲನೆ ನೀಡಿದರು.

ಬಿಜೆಪಿ ರಾಷ್ಟ್ರ ಘಟಕದ ಯೋಜನೆಯಂತೆ ಪ್ರತಿ ಬೂತ್‌ನಲ್ಲಿ ಕನಿಷ್ಠ 100 ಮನೆಗಳಿಗೆ ತೆರಳಿ ಕೇಂದ್ರ ಸರ್ಕಾರದ ಸಾಧನೆಗಳು, ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ಕೊರೊನಾ ತಡೆಗಟ್ಟುವಲ್ಲಿ ತೆಗೆದುಕೊಂಡ ದಿಟ್ಟ ಕ್ರಮಗಳು ಹಾಗೂ ಲಾಕ್ ಡೌನ್ ನಂತರ ದೇಶದ ಆರ್ಥಿಕ ಸುಧಾರಣೆಗಾಗಿ ಮತ್ತು ಸ್ವಾವಲಂಬಿ ಭಾರತ ನಿರ್ಮಾಣಕ್ಕಾಗಿ ಆತ್ಮ ನಿರ್ಭರ ಭಾರತದ ಅಡಿಯಲ್ಲಿ ವಿವಿಧ ಯೋಜನೆಗಳಿಗೆ ₹20 ಲಕ್ಷ ಕೋಟಿಗಳ ಪ್ಯಾಕೇಜ್‌ ನೀಡಿರುವ ಮಾಹಿತಿವುಳ್ಳ ಕರಪತ್ರಗಳನ್ನು ಜನರಿಗೆ ಹಂಚಲಾಯಿತು.

ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರದೀಪ ಮುಳ್ಳೂರ, ಮುಖಂಡರಾದ ರಮೇಶ ಪಾಲನಕರ, ಬಸವರಾಜ ಮಾಸೂರ, ಬಸವರಾಜ ತುಪ್ಪುದ ಭಾಗವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.