ADVERTISEMENT

49 ಜನರಿಂದ ರಕ್ತದಾನ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2025, 15:29 IST
Last Updated 3 ಫೆಬ್ರುವರಿ 2025, 15:29 IST
ಹಾನಗಲ್ ತಾಲ್ಲೂಕಿನ ಬೆಳಗಾಲಪೇಟೆ ಗ್ರಾಮದಲ್ಲಿ ಭಾನುವಾರ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು
ಹಾನಗಲ್ ತಾಲ್ಲೂಕಿನ ಬೆಳಗಾಲಪೇಟೆ ಗ್ರಾಮದಲ್ಲಿ ಭಾನುವಾರ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು   

ಹಾನಗಲ್: ತಾಲ್ಲೂಕಿನ ಬೆಳಗಾಲಪೇಟೆ ಗ್ರಾಮದಲ್ಲಿ ‘ಹನಿ ರಕ್ತ ಕೊಟ್ಟವನೇ ಧಣಿ’ ಎಂಬ ಘೋಷಣೆಯೊಂದಿಗೆ ಭಾನುವಾರ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು.

ಶಿವಲಿಂಗೇಶ್ವರ ಮತ್ತು ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಗ್ರಾಮದ ವೀರಭದ್ರೇಶ್ವರ ದೇವಸ್ಥಾನ ಆವರಣದಲ್ಲಿ ನಡೆದ ಶಿಬಿರದಲ್ಲಿ 49 ಜನರು ರಕ್ತದಾನ ಮಾಡಿದರು.

ವೀರಭದ್ರೇಶ್ವರ ದೇವಸ್ಥಾನ ಸೇವಾ ಸಮಿತಿ ಹಾಗೂ ದಿ.ಮಾತೋಶ್ರೀ ರುದ್ರಮ್ಮ ಕೋಂ ಗುರುಪಾದಪ್ಪ ಕಮಡೊಳ್ಳಿ ಸ್ಮಾರಕ ಟ್ರಸ್ಟ್ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಹುಬ್ಬಳ್ಳಿ ಕಿಮ್ಸ್ ರಕ್ತ ಭಂಡಾರದ ಸಿಬ್ಬಂದಿ ಹಾಜರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.