ರಟ್ಟೀಹಳ್ಳಿ: ಮಾಸೂರಿನ ಎಸ್.ಬಿ. ಪಾಟೀಲ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಕರೇಗೌಡ ಕೋಣ್ತಿ ರಚಿಸಿರುವ ‘ಬಿಸಿಲ್ಗುದುರೆ’ ಹಾಗೂ ‘ಒಡಲೊಳಗಿನ ಕನವರಿಕೆ’ ಕೃತಿಗಳ ಲೋಕಾರ್ಪಣೆ ಸಮಾರಂಭ ಡಿ.24ರಂದು ಪಟ್ಟಣದ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ 9.30ಕ್ಕೆ ಜರುಗಲಿದೆ.
ಸಮಾರಂಭದ ಸಾನ್ನಿಧ್ಯವನ್ನು ರಟ್ಟೀಹಳ್ಳಿ ಕಬ್ಬಿಣಕಂತಿಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ, ಯಲವಟ್ಟಿಯ ಗುರು ಸಿದ್ಧಾಶ‍್ರಮ ಯೋಗಾನಂದ ಸ್ವಾಮೀಜಿ, ತಿಪ್ಪಾಯಿಕೊಪ್ಪ ಮೂಕಪ್ಪ ಶಿವಯೋಗಿಗಳ ಮಠ ಮಹಾಂತ ಸ್ವಾಮೀಜಿ ವಹಿಸಲಿದ್ದಾರೆ.
ಸಮಾರಂಭದಲ್ಲಿ ಶಾಸಕ ಯು.ಬಿ. ಬಣಕಾರ, ಮಾಜಿ ಕೃಷಿ ಸಚಿವ ಬಿ.ಸಿ. ಪಾಟೀಲ, ನಿವೃತ್ತ ಜಿಲ್ಲಾ ನ್ಯಾಯಾಧೀಶ ಚನ್ನಬಸಪ್ಪ ಮಾಳಗಿ, ವಿಶ್ರಾಂತ ಕನ್ನಡ ಉಪನ್ಯಾಸಕ ಪ್ರೇಮಾನಂದ ಲಕ್ಕಣ್ಣನವರ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಲಿಂಗಯ್ಯ ಹಿರೇಮಠ, ಸಾಹಿತಿ ನಿಂಗಪ್ಪ ಚಳಗೇರಿ, ರಟ್ಟೀಹಳ್ಳಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎನ್.ಸಿ.ಕಠಾರೆ, ಮಾಜಿ ಶಾಸಕ ಬಿ.ಎಚ್. ಬನ್ನಿಕೋಡ, ಮಾಜಿ ಮುಖ್ಯ ಸಚೇತಕ ಡಿ.ಎಂ.ಸಾಲಿ, ಸಹಕಾರಿ ಧುರೀಣ, ಎಸ್.ಎಸ್.ಪಾಟೀಲ, ಜಿಲ್ಲಾ ರೈತ ಸಂಘದ ಅದ್ಯಕ್ಷ ರಾಮಣ್ಣ ಕೆಂಚಳ್ಳೇರ ಸೇರಿದಂತೆ ಹಲವಾರು ಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.