ADVERTISEMENT

ಜಿಲ್ಲಾ ಕಿರು ಹೊತ್ತಿಗೆ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 26 ಜುಲೈ 2021, 14:20 IST
Last Updated 26 ಜುಲೈ 2021, 14:20 IST
-
-   

ಹಾವೇರಿ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರವು ಎರಡು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರತಂದಿರುವ ಹಾವೇರಿ ಜಿಲ್ಲಾ ಅಭಿವೃದ್ಧಿ ಕಾರ್ಯಗಳ ಪ್ರಗತಿ ಕುರಿತಾದ ‘ಜನಸ್ನೇಹಿ ಆಡಳಿತದ ಎರಡು ವರ್ಷ ಸವಾಲುಗಳ ಮೀರಿದ ಸಾಧನಾ ಪರ್ವ’ ಹೆಸರಿನ ಕಿರುಹೊತ್ತಿಗೆಯನ್ನು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಬಿಡುಗಡೆಗೊಳಿಸಿದರು.

ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಹಾಗೂ ರಾಜ್ಯ ಮಟ್ಟದ ಪ್ರಗತಿ ಕುರಿತಾದ ಕಿರುಹೊತ್ತಿಗೆ ಬಿಡುಗಡೆಗೊಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೊಹಮ್ಮದ್‌ ರೋಶನ್‌, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌. ಯೋಗೇಶ್ವರ, ಉಪವಿಭಾಗಾಧಿಕಾರಿ ಶಿವಾನಂದ ಉಳ್ಳಾಗಡ್ಡಿ, ವಾರ್ತಾಧಿಕಾರಿ ಬಿ.ಆರ್.ರಂಗನಾಥ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.