ಬ್ಯಾಡಗಿ: ಜಮೀನಿನಲ್ಲಿದ್ದ ಕೊಳವೆಬಾವಿ ಚಾಲೂ ಮಾಡಲು ಹೋಗಿದ್ದ ಬಾಲಕನೊಬ್ಬ ವಿದ್ಯುತ್ ಪ್ರವಹಿಸಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಹಳೇ ಗುಂಗರಗೊಪ್ಪ ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.
ವಿನಾಯಕ ಹನುಮಂತಪ್ಪ ಇಮ್ಮಡಿ (17) ಮೃತ ಬಾಲಕ. ತಾಯಿಯೊಂದಿಗೆ ಗೊಬ್ಬರ ಹಾಕಲು ಹೊಲಕ್ಕೆ ತೆರಳಿದ್ದ ಬಾಲಕ ಕರೆಂಟ್ ಬೋರ್ಡ್ ಹತ್ತಿರ ಹೋದಾಗ ಈ ಅವಘಡ ಸಂಭವಿಸಿದೆ ಎಂದು ಪೊಲಿಸ್‌ರು ತಿಳಿಸಿದ್ದಾರೆ. ಬ್ಯಾಡಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಸ್ಪೀಟ್: ಐವರು ವಶಕ್ಕೆ
ಬ್ಯಾಡಗಿ: ಪಟ್ಟಣದ ಗುಮ್ಮನಹಳ್ಳಿ ರಸ್ತೆಯ ಎಪಿಎಂಸಿ ಗೇಟ್ ಬಳಿ ಇಸ್ಪೀಟ್ ಆಡುತ್ತಿದ್ದ ಐವರು ಆರೋಪಿಗಳನ್ನು ಗುರುವಾರ ಸಂಜೆ ಬಂಧಿಸಲಾಗಿದೆ.
ಖಚಿತ ಮಾಹಿತಿ ಆಧರಿಸಿ ಪಿಎಸ್‌ಐ ಭಾರತಿ ಕುರಿ ನೇತೃತ್ವದ ತಂಡ ದಾಳಿ ನಡೆಸಿದೆ. ಆರೋಪಿಗಳಿಂದ ₹ 2,115 ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬ್ಯಾಡಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.