ADVERTISEMENT

ಬಸ್‌ ಉರುಳಿ 12 ಪ್ರಯಾಣಿಕರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2021, 16:08 IST
Last Updated 17 ಮಾರ್ಚ್ 2021, 16:08 IST
ಬ್ಯಾಡಗಿ ತಾಲ್ಲೂಕಿನ ಛತ್ರ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಸಂಸ್ಥೆಗೆ ಸೇರಿದ ಬಸ್‌ ಉರುಳಿ ಬಿದ್ದಿರುವುದು
ಬ್ಯಾಡಗಿ ತಾಲ್ಲೂಕಿನ ಛತ್ರ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಸಂಸ್ಥೆಗೆ ಸೇರಿದ ಬಸ್‌ ಉರುಳಿ ಬಿದ್ದಿರುವುದು   

ಬ್ಯಾಡಗಿ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ ಉರುಳಿಬಿದ್ದ ಪರಿಣಾಮ ಅದರಲ್ಲಿದ್ದ 12ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾದ ಘಟನೆ ಬುಧವಾರ ತಾಲ್ಲೂಕಿನ ಛತ್ರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.

ಗಾಯಾಳುಗಳನ್ನು ಹಾವೇರಿ ಹಾಗೂ ರಾಣೆಬೆನ್ನೂರು ಸರ್ಕಾರಿ ಆಸ್ಪತ್ರೆಗಳಿಗೆ ಆಂಬುಲೆನ್ಸ್‌‌ ಮೂಲಕ ಸಾಗಿಸಲಾಗಿದೆ. ಯಾವುದೇ ಸಾವು ಸಂಭವಿಸಿಲ್ಲ.

ಬ್ಯಾಡಗಿ ಘಟಕಕ್ಕೆ ಸೇರಿದ ಬಸ್‌ ಹಾವೇರಿಯಿಂದ ಹೊರಟು ರಾಣೆಬೆನ್ನೂರು ತಲುಪಿ ನಂತರ ಗದಗಕ್ಕೆ ತೆರಳುತ್ತಿತ್ತು. ಛತ್ರ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದಿದೆ. ಬಸ್‌ ಉರುಳಿದ ರಭಸಕ್ಕೆ ಪ್ರಯಾಣಿಕರ ವಸ್ತುಗಳು ಚಲ್ಲಾಪಿಲ್ಲಿಯಾಗಿ ಬಿದ್ದಿವೆ.

ADVERTISEMENT

ಇಬ್ಬರು ಪ್ರಯಾಣಿಕರ ತಲೆಗೆ ಪೆಟ್ಟಾಗಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಧಾವಿಸಿದ ಗ್ರಾಮಸ್ಥರು ಗಾಯಗೊಂಡ ಪ್ರಯಾಣಿಕರನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು ಎಂದು ಛತ್ರ ಗ್ರಾಮದ ಮಣಿಕಂಠ ಪೋಟೇರ ಹೇಳಿದರು.

ಬ್ಯಾಡಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.