ADVERTISEMENT

ಬ್ಯಾಡಗಿ: ಮೆಣಸಿನಕಾಯಿ ಆವಕ, ಬೆಲೆ ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2026, 2:08 IST
Last Updated 13 ಫೆಬ್ರುವರಿ 2026, 2:08 IST
ಬ್ಯಾಡಗಿ ಮೆಣಸಿನಕಾಯಿ
ಬ್ಯಾಡಗಿ ಮೆಣಸಿನಕಾಯಿ   

ಬ್ಯಾಡಗಿ: ಇಲ್ಲಿಯ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಫೆ.12ರಂದು 1,31,642 ಚೀಲ (32,310 ಕ್ವಿಂಟಲ್‌) ಮೆಣಸಿನಕಾಯಿ ಮಾರಾಟವಾಗಿದ್ದು, ಆವಕದಲ್ಲಿ ಮತ್ತೆ ಹೆಚ್ಚಳ ಕಂಡು ಬಂದಿದೆ. ಆದರೆ ಬ್ಯಾಡಗಿ ಡಬ್ಬಿ ಮೆಣಸಿನಕಾಯಿ ಗರಿಷ್ಠ ಬೆಲೆ ಮಾರಾಟವಾಗಿವೆ.

ಈ ವಾರದಲ್ಲಿ 2,92,387 ಚೀಲ (73,096 ಕ್ವಿಂಟಲ್‌) ಮೆಣಸಿನಕಾಯಿ ಮಾರಾಟವಾದಂತಾಗಿದೆ. 5 ಚೀಲ ಡಬ್ಬಿ ಮೆಣಸಿನಕಾಯಿ ಕ್ವಿಂಟಲ್‌ಗೆ ₹87,786 ರಂತೆ, 12 ಚೀಲ ಬ್ಯಾಡಗಿ ಕಡ್ಡಿ ಮೆಣಸಿನಕಾಯಿ ಕ್ವಿಂಟಲ್‌ಗೆ ₹68,889 ರಂತೆ ಗರಿಷ್ಠ ಬೆಲೆಯಲ್ಲಿ ಮಾರಾಟವಾಗಿವೆ. ಗುಂಟೂರು ತಳಿ ಕ್ವಿಂಟಲ್‌ಗೆ ₹19,000ರಂತೆ ಗರಿಷ್ಠ ಬೆಲೆಯಲ್ಲಿ ಮಾರಾಟವಾಗಿ ಸ್ಥಿರತೆ ಕಾಯ್ದುಕೊಂಡಿದೆ. ಮಾರುಕಟ್ಟೆಯಲ್ಲಿ ಇಂದು 5531 ವೆರೈಟಿ ಮೆಣಸಿನಕಾಯಿ ಹೆಚ್ಚು ಆವಕವಾಗಿದ್ದು, ಕ್ವಿಂಟಲ್‌ಗೆ ₹23 ಸಾವಿರದಿಂದ ₹25 ಸಾವಿರವರೆಗೆ ಮಾರಾಟವಾಗಿವೆ.

ಮಾರುಕಟ್ಟೆಯಲ್ಲಿ ಗುರುವಾರ 15,380 ಲಾಟ್‌ ಮೆಣಸಿನಕಾಯಿ ಟೆಂಡರ್‌ಗೆ ಇಡಲಾಗಿದ್ದು, ಈ ಪೈಕಿ ತೇವಾಂಶ ಹೆಚ್ಚಿರುವ ಮತ್ತು ಗುಣಮಟ್ಟದ ಕೊರತೆ ಇರುವ 311 ಲಾಟ್‌ಗಳಿಗೆ ವರ್ತಕರು ಟೆಂಡರ್‌ ನಮೂದಿಸಿಲ್ಲ. ಸರಾಸರಿ ಬೆಲೆಯಲ್ಲಿಯೂ ತುಸು ಹೆಚ್ಚಳ ಕಂಡು ಬಂದಿದ್ದು, ಡಬ್ಬಿ ಮೆಣಸಿನಕಾಯಿ ಕ್ವಿಂಟಲ್‌ಗೆ ₹51,509, ಕಡ್ಡಿ ಮೆಣಸಿನಕಾಯಿ ₹48,009 ಹಾಗೂ ಗುಂಟೂರ ತಳಿ ₹15,000ರಂತೆ ಸರಾಸರಿ ಬೆಲೆಯಲ್ಲಿ ಮಾರಾಟವಾಗಿವೆ. ಇಂದಿನ ಟೆಂಡರ್ ಪ್ರಕ್ರಿಯೆಯಲ್ಲಿ ಒಟ್ಟು 375 ಖರೀದಿ ವರ್ತಕರು ಪಾಲ್ಗೊಂಡಿದ್ದರು ಎಂದು ಎಪಿಎಂಸಿ ಮೂಲಗಳು ತಿಳಿಸಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.