ಬ್ಯಾಡಗಿ ಮೆಣಸಿನಕಾಯಿ ಜೊತೆ ರೈತ ಗುರು ಮಾಳಿ
ಬ್ಯಾಡಗಿ: ಇಲ್ಲಿಯ ಅಂತರರಾಷ್ಟ್ರೀಯ ಮೆಣಸಿನಕಾಯಿ ಮಾರುಕಟ್ಟೆಗೆ ಗುರುವಾರ 27,486 ಚೀಲ (6,871 ಕ್ವಿಂಟಲ್) ಮೆಣಸಿನಕಾಯಿ ಮಾರಾಟಕ್ಕೆ ತರಲಾಗಿದ್ದು, ಆವಕದಲ್ಲಿ ತುಸು ಹೆಚ್ಚಳ ಕಂಡು ಬಂದಿದೆ.
ಕಳೆದ ಸೋಮವಾರ ಮಾರುಕಟ್ಟೆಗೆ ಕನಕ ಜಯಂತಿ ಪ್ರಯುಕ್ತ ರಜೆ ನೀಡಲಾಗಿತ್ತು. ಹೀಗಾಗಿ ಗುರುವಾರ ಆವಕದಲ್ಲಿ ತುಸು ಹೆಚ್ಚಳವಾಗಿದೆ ಎನ್ನಲಾಗಿದೆ. ಗುರುವಾರ ಮಾರುಕಟ್ಟೆಗೆ 3,996 ಲಾಟ್ ಮೆಣಸಿನಕಾಯಿ ಚೀಲಗಳನ್ನು ಟೆಂಡರ್‌ಗೆ ಇಡಲಾಗಿದ್ದು, ಈ ಪೈಕಿ ತೇವಾಂಶ ಹೆಚ್ಚಿರುವ ಹಾಗೂ ಗುಣಮಟ್ಟದ ಕೊರತೆ ಇರುವ 579 ಲಾಟ್‌ಗಳಿಗೆ ವರ್ತಕರು ಟೆಂಡರ್ ನಮೂದಿಸಿಲ್ಲ. 10 ಚೀಲ ಡಬ್ಬಿ ಮೆಣಸಿನಕಾಯಿ ₹27,009 ರಂತೆ, 3 ಚೀಲ ಕಡ್ಡಿ ಮೆಣಸಿನಕಾಯಿ ₹26,666 ರಂತೆ ಮತ್ತು ಗುಂಟೂರು ತಳಿ ಮೆಣಸಿನಕಾಯಿ ₹16,659 ರಂತೆ ಗರಿಷ್ಟ ಬೆಲೆಯಲ್ಲಿ ಮಾರಾಟವಾಗಿದ್ದು, ತುಸು ಏರಿಕೆ ಕಂಡಿದೆ. ಸರಾಸರಿ ಬೆಲೆಯಲ್ಲಿಯೂ ಏರಿಕೆಯಾಗಿದ್ದು, ಬ್ಯಾಡಗಿ ಡಬ್ಬಿ ₹23,509, ಬ್ಯಾಡಗಿ ಕಡ್ಡಿ ₹22,209 ಹಾಗೂ ಗುಂಟೂರ ತಳಿ ₹12,959 ರಂತೆ ಮಾರಾಟವಾಗಿವೆ.
ಇಂದಿನ ಟೆಂಡರ್ ಪ್ರಕ್ರಿಯೆಯಲ್ಲಿ ಒಟ್ಟು 214 ಖರೀದಿ ವರ್ತಕರು ಪಾಲ್ಗೊಂಡಿದ್ದರು ಎಂದು ಎಪಿಎಂಸಿ ಮೂಲಗಳು ತಿಳಿಸಿವೆ.
ಗುರುವಾರದ ಮಾರುಕಟ್ಟೆ ದರ (ಪ್ರತಿ ಕ್ವಿಂಟಲ್‌ಗೆ)
ಕನಿಷ್ಠ– ಗರಿಷ್ಠ
ಬ್ಯಾಡಗಿ ಕಡ್ಡಿ ₹2,489- ₹26,666
ಬ್ಯಾಡಗಿ ಡಬ್ಬಿ ₹2,809- ₹27,009
ಗುಂಟೂರ ತಳಿ ₹1,009-₹16,659
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.