ಸಾವು
ಪ್ರಾತಿನಿಧಿಕ ಚಿತ್ರ
ಬ್ಯಾಡಗಿ: ತಾಲ್ಲೂಕಿನ ಕಳಗೊಂಡ ಗ್ರಾಮದ ಕರೆಗೆ ಹಾರಿ ರೈತನೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ನಡೆದಿದೆ.
ಪಕ್ಕದ ತಿಪಲಾಪುರ ಗ್ರಾಮದ ಹನುಂತಪ್ಪ ಪುಟ್ಟಪ್ಪ ಕೂಸಮ್ಮನವರ (55) ಮೃತ ರೈತ. ತಿಪಲಾಪುರ ಗ್ರಾಮದ ಸರ್ವೆ ನಂಬರ 24/5 ಮತ್ತು 38/1 ರಲ್ಲಿ ಕೃಷಿ ಜಮೀನು ಹೊಂದಿದ್ದಾರೆ. ಕೃಷಿ ಉದ್ದೇಶಕ್ಕೆ ಸಹಕಾರಿ ಸಂಘ ಮತ್ತು ವಿವಿಧ ಬ್ಯಾಂಕ್‌ಗಳಲ್ಲಿ ಸಾಲ ಪಡೆದುಕೊಂಡಿದ್ದರು. ಜೊತೆಗೆ ಕೈಗಡ ಮತ್ತು ವಿವಿಧ ಪೈನಾನ್ಸ್‌ಗಳಲ್ಲಿಯೂ ಸಾಲ ಮಾಡಿಕೊಂಡಿದ್ದರು. ಪ್ರಸಕ್ತ ಉತ್ತಮ ಬೆಳೆ ಬಾರದೆ ಮಾಡಿದ ಸಾಲ ಹೇಗೆ ತೀರಿಸುವುದು ಎನ್ನುವ ಚಿಂತೆಯಲ್ಲಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹಾಲಪ್ಪ ಬಸಪ್ಪ ಕೂಸಮ್ಮನವರ ಕಾಗಿನೆಲೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.