ಸಾವು
(ಪ್ರಾತಿನಿಧಿಕ ಚಿತ್ರ)
ಹಾವೇರಿ: ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ತಡಸ ಗ್ರಾಮದಲ್ಲಿ ಪವಿತ್ರಾ ಹಡಗಲಿ (35) ಎಂಬುವವರ ಕೊಲೆ ನಡೆದಿದ್ದು, ಆರೋಪಿ ಎನ್ನಲಾದ ಪತಿ ರವಿ (40) ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
‘ತಡಸ ಗ್ರಾಮದ ನಿವಾಸಿ ಪವಿತ್ರಾ ಹಾಗೂ ರವಿ ಹಲವು ವರ್ಷಗಳ ಹಿಂದೆ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದರು. ಆರೋಪಿ ರವಿ, ಕೂಲಿ ಕೆಲಸ ಮಾಡುತ್ತಿದ್ದರು’ ಎಂದು ಹೆಚ್ಚುವರಿ ಎಸ್‌ಪಿ ಎಲ್.ವೈ. ಶಿರಕೋಳ ತಿಳಿಸಿದರು.
‘ಪತ್ನಿ ಶೀಲದ ಬಗ್ಗೆ ಶಂಕಿಸುತ್ತಿದ್ದ ಆರೋಪಿ, ಅದೇ ಕಾರಣಕ್ಕೆ ಜಗಳ ಮಾಡುತ್ತಿದ್ದ. ಸೋಮವಾರ ನಸುಕಿನಲ್ಲಿ ಇಬ್ಬರ ನಡುವೆ ಪುನಃ ಜಗಳ ಶುರುವಾಗಿತ್ತು. ಇದೇ ಸಂದರ್ಭದಲ್ಲಿಯೇ ಆರೋಪಿ ಪತ್ನಿಯನ್ನು ಕತ್ತು ಸೀಳಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆಂದು ಆಸ್ಪತ್ರೆಗೆ ಸಾಗಿಸಲಾಗಿದೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.